ADVERTISEMENT

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಧಿಯ ಟೆಂಡರ್‌ ತನಿಖೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2021, 20:01 IST
Last Updated 26 ನವೆಂಬರ್ 2021, 20:01 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದ ವಿವಿಧ ಇಲಾಖೆಗಳು, ಸರ್ಕಾರದ ಅಧೀನ ಸಂಸ್ಥೆಗಳಲ್ಲಿ ನಡೆದಿರುವ ₹ 10 ಕೋಟಿಗಿಂತ ಹೆಚ್ಚು ಅನುದಾನದ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ ಮತ್ತು ಬಿಲ್‌ ಪಾವತಿಸಿಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಶುಕ್ರವಾರ ಆದೇಶಿಸಿದ್ದಾರೆ.

ಲೋಕೋಪಯೋಗಿ, ಜಲ ಸಂಪನ್ಮೂಲ, ಸಣ್ಣ ನೀರಾವರಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌, ಇಂಧನ, ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸೇರಿದಂತೆ ಕಾಮಗಾರಿಗಳನ್ನು ಕೈಗೊಳ್ಳುವ ಸರ್ಕಾರದ ಎಲ್ಲ ಸಂಸ್ಥೆಗಳ ಮುಖ್ಯಸ್ಥರಿಗೆ ಪತ್ರ ಬರೆದಿರುವ ಮುಖ್ಯ ಕಾರ್ಯದರ್ಶಿ ತನಿಖೆಗೆ ನಿರ್ದೇಶನ ನೀಡಿದ್ದಾರೆ.

ಮುಖ್ಯ ಕಾರ್ಯದರ್ಶಿಗೆ ಗುರುವಾರ ಪತ್ರ ಬರೆದಿದ್ದ ಬೊಮ್ಮಾಯಿ, ತಾವು ಅಧಿಕಾರ ಸ್ವೀಕರಿಸಿದ ದಿನದಿಂದ ಕೈಗೊಂಡಿರುವ ಬೃಹತ್‌ ಕಾಮಗಾರಿಗಳ ಟೆಂಡರ್‌ ಮತ್ತು ಬಿಲ್ ಪಾವತಿಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸುವಂತೆ ಸೂಚಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.