ಸಿಎಂ ಸಿದ್ದರಾಮಯ್ಯ
ಬೆಂಗಳೂರು: ‘ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
‘ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಈ ಹೇಯ ಕೃತ್ಯದಲ್ಲಿ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ. ಉಗ್ರ
ಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ರವಾನಿಸಲಾಗಿದೆ’ ಎಂದು ‘ಎಕ್ಸ್’ನಲ್ಲಿ ತಿಳಿಸಿದ್ದಾರೆ.
‘ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಸೂಚನೆ ನೀಡಿದ್ದೇನೆ. ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಲಿದೆ’ ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.