ADVERTISEMENT

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2018, 19:56 IST
Last Updated 30 ನವೆಂಬರ್ 2018, 19:56 IST
   

ಬೆಂಗಳೂರು: ಶಿಕ್ಷಕರಾಗಿ ನೇಮಕಾತಿ ಹೊಂದಲು ಕನಿಷ್ಠ ಅರ್ಹತೆಯಾಗಿ ಪರಿಗಣಿಸುವ ಶಿಕ್ಷಕರ ಅರ್ಹತಾ ಪರೀಕ್ಷೆಗೆ(ಟಿಇಟಿ) ಅರ್ಜಿ ಆಹ್ವಾನಿಸಲಾಗಿದೆ.

1ರಿಂದ 5ನೇ ತರಗತಿಗೆ ಬೋಧಿಸುವ ಶಿಕ್ಷಕರಿಗೆ: ದ್ವಿತೀಯ ಪಿ.ಯು.ಸಿಯಲ್ಲಿ ಕನಿಷ್ಠ ಶೇ 50 ಅಂಕ ಗಳಿಸಿ, ಡಿ.ಇಡಿ ಅಥವಾ ಬಿ.ಇಡಿ ಅಥವಾ ಡಿ.ಎಲ್‌.ಇಡಿ ಕೋರ್ಸ್‌ ಮುಗಿಸಿದವರು. ಅಥವಾ ಡಿ.ಇಡಿ ಅಥವಾ ಬಿ.ಇಡಿ ಅಥವಾಡಿ.ಎಲ್‌.ಇಡಿ ಕೋರ್ಸ್‌ನ ಅಂತಿಮ ವರ್ಷದ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರು. ಡಿಪ್ಲೊಮಾ ಇನ್‌ ಎಜುಕೇಷನ್‌(ವಿಶೇಷ ಶಿಕ್ಷಣ) ಕೋರ್ಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ.

6ರಿಂದ 8ನೇ ತರಗತಿ: ಪದವಿ ಪರಿಕ್ಷೆಯಲ್ಲಿ ಕನಿಷ್ಠ ಶೇ 50 ಅಂಕ ಗಳಿಕೆಯೊಂದಿಗೆ ಡಿ.ಡಿಎಲ್‌.ಇಡಿ ಅಥವಾ ಬಿ.ಇಡಿ, ದ್ವಿತೀಯ ಪಿ.ಯು.ಸಿಯಲ್ಲಿ ಕನಿಷ್ಠ ಶೇ 50 ಅಂಕ ಗಳಿಸಿ ಬಿ.ಇಎಲ್‌.ಇಡಿ ಕೋರ್ಸ್‌ ಮಾಡಿದವರು ಅಥವಾ ಈ ಕೋರ್ಸ್‌ಗಳ ಅಂತಿಮ ವರ್ಷದ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವವರು ಅರ್ಜಿ ಸಲ್ಲಿಸಬಹುದು.

ADVERTISEMENT

ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹700, ₹1,000(6ರಿಂದ 8ನೇ ತರಗತಿ), ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ ₹350, ₹500 ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿ.25 ಕೊನೆಯ ದಿನ. ಫೆಬ್ರುವರಿ 3ರಂದು ಪರೀಕ್ಷೆ ನಡೆಯಲಿದೆ.
ಮಾಹಿತಿಗೆ:http://www.schooleducation.kar.nic.in/

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.