ADVERTISEMENT

ರಾಜ್ಯದ ವಿವಿಧ ಕೇಂದ್ರಗಳಲ್ಲಿ ಸುಗಮವಾಗಿ ನಡೆದ ಟಿಇಟಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2025, 16:26 IST
Last Updated 7 ಡಿಸೆಂಬರ್ 2025, 16:26 IST
<div class="paragraphs"><p>ರಾಜ್ಯದ ವಿವಿಧ ಕೇಂದ್ರಗಳಲ್ಲಿ ಸುಗಮವಾಗಿ ನಡೆದ ಟಿಇಟಿ ಪರೀಕ್ಷೆ</p></div>

ರಾಜ್ಯದ ವಿವಿಧ ಕೇಂದ್ರಗಳಲ್ಲಿ ಸುಗಮವಾಗಿ ನಡೆದ ಟಿಇಟಿ ಪರೀಕ್ಷೆ

   

ಬೆಂಗಳೂರು: ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)– 2025 ಭಾನುವಾರ ಸುಗಮವಾಗಿ ನಡೆಯಿತು.

ರಾಜ್ಯದಾದ್ಯಂತ ಏಕಕಾಲದಲ್ಲಿ ಬೆಳಿಗ್ಗೆ ಮತ್ತು ಮಧ್ಯಾಹ್ನ ಪರೀಕ್ಷೆ ನಡೆಯಿತು. 1ರಿಂದ 5ನೇ ತರಗತಿಗೆ ಬೋಧಿಸುವ ಶಿಕ್ಷಕರ ಅರ್ಹತೆಗಾಗಿ ಬೆಳಿಗ್ಗೆ 9.30ರಿಂದ 309 ಕೇಂದ್ರಗಳಲ್ಲಿ ಪರೀಕ್ಷೆ ಹಮ್ಮಿಕೊಳ್ಳಲಾಗಿತ್ತು. ಅರ್ಜಿ ಸಲ್ಲಿಸಿದ್ದ 85 ಸಾವಿರ ಅಭ್ಯರ್ಥಿಗಳಲ್ಲಿ 79 ಸಾವಿರ ಮಂದಿ (ಶೇ 93.35) ಹಾಜರಾಗಿದ್ದರು. 

ADVERTISEMENT

6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರ ಅರ್ಹತೆಗಾಗಿ ಮಧ್ಯಾಹ್ನ 2ರಿಂದ 913 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದವು. ಅರ್ಜಿ ಸಲ್ಲಿಸಿದ್ದ 2.50 ಲಕ್ಷ ಅಭ್ಯರ್ಥಿಗಳ ಪೈಕಿ, 2.37 ಲಕ್ಷ (ಶೇ 94.79) ಮಂದಿ ಪರೀಕ್ಷೆಗೆ ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.