ADVERTISEMENT

ಬಸವಣ್ಣ ಬಗ್ಗೆ ಪಠ್ಯದಲ್ಲಿ ತಪ್ಪು ಮಾಹಿತಿ: ಬಸವಲಿಂಗ ಪಟ್ಟದ್ದೇವರು ಆಕ್ರೋಶ

ಪಠ್ಯಪುಸ್ತಕ ಮರುಮುದ್ರಣಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜೂನ್ 2022, 3:38 IST
Last Updated 2 ಜೂನ್ 2022, 3:38 IST
ಡಾ.ಬಸವಲಿಂಗ ಪಟ್ಟದ್ದೇವರು
ಡಾ.ಬಸವಲಿಂಗ ಪಟ್ಟದ್ದೇವರು   

ಭಾಲ್ಕಿ: ‘9ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಲಿಂಗಾಯತ ಧರ್ಮಗುರು ಬಸವಣ್ಣನವರ ಕುರಿತ ಪಾಠದಲ್ಲಿ ಈ ವರ್ಷ ಕೆಲವಷ್ಟು ಬದಲಾವಣೆ ಮಾಡಿ ಪ್ರಕಟಿ ಸಿದ್ದು ಸರಿಯಲ್ಲ’ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿಗೆ ಪತ್ರ ಬರೆದಿರುವ ಅವರು, ‘ಪಠ್ಯಪುಸ್ತಕದಲ್ಲಿ ಉಪನ ಯನದ ಬಳಿಕ ಬಸವಣ್ಣನವರು ಕೂಡಲಸಂಗಮಕ್ಕೆ ನಡೆದರು ಎಂದು ಬರೆದಿದ್ದು ತಪ್ಪು. ಬಸವಣ್ಣನವರು ತಮ್ಮ ಸಹೋದರಿ ಅಕ್ಕನಾಗಾಯಿಗೆ ಇಲ್ಲದ ಉಪನಯನ ತಮಗೇಕೆ ಎಂದು ಧಿಕ್ಕರಿಸಿ ಕೂಡಲಸಂಗಮಕ್ಕೆ ಹೋಗಿದ್ದರು. ಶೈವ-ಗುರುಗಳ ಸಾನ್ನಿಧ್ಯದಲ್ಲಿ ಲಿಂಗ ದೀಕ್ಷೆ ಪಡೆದರು ಎಂದು ಬರೆದಿರುವುದು ತಪ್ಪು. ಶೈವಗುರುಗಳು ಗುಡಿ-ಗುಂಡಾರಗಳಲ್ಲಿರುವ ಸ್ಥಾವರ ಲಿಂಗಾರಾಧಕರು. ಅವರು ಹೇಗೆ ಇಷ್ಟಲಿಂಗ ದೀಕ್ಷೆ ಮಾಡಬಲ್ಲರು’ ಎಂದು ಅವರು ಪ್ರಶ್ನಿಸಿದ್ದಾರೆ.

‘ಪರಿಷ್ಕೃತ ಪಠ್ಯದಲ್ಲಿ ಆಗಿರುವ ಎಲ್ಲ ದೋಷಗಳನ್ನು ನಿವಾರಿಸಿ ಪಠ್ಯಪುಸ್ತಕ ಮುದ್ರಿಸಬೇಕು. ಬಹುಸಂಖ್ಯಾತ ಲಿಂಗಾಯತರು, ಲಿಂಗಾಯತ ಮಠಾ ಧಿಪತಿಗಳು ಬೃಹತ್‌ ಪ್ರಮಾಣದ ಪ್ರತಿಭಟನೆ ನಡೆಸುವ ಮೊದಲು ಈ ತಪ್ಪು ಸರಿಪಡಿಸಿ ಪಠ್ಯ ಪುಸ್ತಕಗಳನ್ನು ಪ್ರಕಟಿಸಬೇಕು’ ಎಂದರು.

ADVERTISEMENT

*
ಪಠ್ಯ ಕೈಬಿಡುವಂತೆ ಪತ್ರ ಬರೆಯುತ್ತಿರುವವರು, ಅದರ ಹೆಸರಿನಲ್ಲಿ ಪ್ರಚಾರ ಪಡೆಯು ತ್ತಿರುವವರು ವಿಚಾರಹೀನರು. ವಿವಾದ ದಿಂದ ಪ್ರಚಾರ ಪಡೆಯುತ್ತಿದ್ದಾರೆ.
-ಪ್ರತಾಪ ಸಿಂಹ, ಸಂಸದ

*
ಬಸವಣ್ಣನ ಕುರಿತು ತಪ್ಪುಮಾಹಿತಿ ಹೊಂದಿದ 9ನೇ ತರಗತಿ ಸಮಾಜ ವಿಜ್ಞಾನದ ಪಠ್ಯವನ್ನು ಕೂಡಲೇ ಹಿಂಪಡೆಯಬೇಕು. ತಪ್ಪಿದಲ್ಲಿ ಹೋರಾಟ ಮಾಡಬೇಕಾಗುತ್ತದೆ.
-ಮಾತೆ ಗಂಗಾದೇವಿ, ಬಸವ ಧರ್ಮ ಪೀಠಾಧ್ಯಕ್ಷೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.