ADVERTISEMENT

‘ಟಿಜಿಎಸ್’ ಕಂಪನಿ ವಿರುದ್ಧ ಏಳು ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2019, 19:26 IST
Last Updated 6 ಜುಲೈ 2019, 19:26 IST

ಬೆಂಗಳೂರು:ಕೈಗೆಟಕುವ ಬೆಲೆಯಲ್ಲಿ ನಿವೇಶನ ಹಾಗೂ ಫ್ಲ್ಯಾಟ್‌ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿರುವ ಆರೋಪ ಎದುರಿಸುತ್ತಿರುವ ‘ಟಿಜಿಎಸ್‌’ ಕಂಪನಿ ವಿರುದ್ಧ ಮತ್ತೆ ಏಳು ಎಫ್‌ಐಆರ್‌ಗಳು ದಾಖಲಾಗಿವೆ.

ಕಂಪನಿ ವಿರುದ್ಧ ನಗರದ ಹಲವು ಠಾಣೆಗಳಲ್ಲಿ ಈ ಹಿಂದೆಯೇ ಪ್ರಕರಣಗಳು ದಾಖಲಾಗಿದ್ದವು. ಅವುಗಳ ತನಿಖೆಯನ್ನು ಸದ್ಯ ಸಿಐಡಿ ನಡೆಸುತ್ತಿದೆ. ಈಗ ನ್ಯಾಯಾಲಯದ ನಿರ್ದೇಶನದಂತೆ ಎಚ್‌ಎಸ್‌ಆರ್‌ ಲೇಔಟ್ ಪೊಲೀಸರು, ಇದೀಗ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

‘2015ರಿಂದಲೇ ಕಂಪನಿ ವಿರುದ್ಧ ದೂರುಗಳು ಬರುತ್ತಿವೆ. ಈಗ ಪುನಃ ಏಳು ಮಂದಿ ಸಂತ್ರಸ್ತರು ದೂರು ನೀಡಿದ್ದಾರೆ. ಕಂಪನಿಯ ಮನ್‌ದೀಪ್ ಕೌರ್, ಸಚಿನ್ ನಾಯಕ್ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸುವ ಸಂಬಂಧ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.