ADVERTISEMENT

ಸಿದ್ದರಾಮಯ್ಯ ಆಡಳಿತ ರೈತರಿಗೆ ಪಾಲಿಗೆ ಟಿಪ್ಪು ಆಡಳಿತದಂತಿತ್ತು: ಬಿಜೆಪಿ ಟ್ವೀಟ್

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2020, 10:06 IST
Last Updated 25 ಅಕ್ಟೋಬರ್ 2020, 10:06 IST
 ಸಿದ್ದರಾಮಯ್ಯ
ಸಿದ್ದರಾಮಯ್ಯ   

ಬೆಂಗಳೂರು: ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮ್ಮ ಆಡಳಿತ ರೈತರ ಪಾಲಿಗೆ ಟಿಪ್ಪು ಆಡಳಿತದಂತಿತ್ತು’ ಎಂದು ಬಿಜೆಪಿ ಟೀಕಿಸಿದೆ.

ಸಿದ್ದರಾಮಯ್ಯ ನೆರೆ ಪೀಡಿತ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ‘ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ‌ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿದ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಅವರು ಜನರ ಜೊತೆ ಮಾತನಾಡಿಲ್ಲ ಎಂದು ವಾಗ್ದಾಳಿ ‌ನಡೆಸಿದ್ದರು.

ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ.‌ ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದ್ದರು.

ADVERTISEMENT

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ‘ರೈತರ ಪಾಲಿಗೆ ಮರಣಕೂಪದಂತಿದ್ದ ನಿಮ್ಮ (ಸಿದ್ದರಾಮಯ್ಯ) ಅವಧಿಯಲ್ಲಿ 3000ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡದ್ದು ದುರ್ದೈವ. ಅನ್ನದಾತರು ಸಾವಿಗೆ ಶರಣಾಗುತ್ತಿದ್ದರೆ ನೀವು ಮಾತ್ರ ನೆಮ್ಮದಿಯಾಗಿ ನಿದ್ರಿಸುತ್ತಿದ್ದಿರಿ, ಅಲ್ಲವೇ?’ ಎಂದು ವ್ಯಂಗ್ಯವಾಡಿದೆ.

ಮಾನ್ಯ ಸಿದ್ದರಾಮಯ್ಯನವರೇ, ನಿಮ್ಮ ದುರಾಡಳಿತದಲ್ಲಿ ಬೆಳಗಾವಿಯ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ‘ರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ಹೇಳಿದ್ದಿರಿ. ಓಬ್ಬ ಮುಖ್ಯಮಂತ್ರಿಯಾಗಿ ಆಡುವ ಮಾತೇ ಇದು ಸಿದ್ದರಾಮಯ್ಯ? ಎಂದು ಬಿಜೆಪಿ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.