ADVERTISEMENT

ಅಧಿಕಾರಕ್ಕಾಗಿ ಬಿಜೆಪಿಯಲ್ಲಿ ಕಿತ್ತಾಟ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಮೇ 2021, 8:04 IST
Last Updated 28 ಮೇ 2021, 8:04 IST
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಹುಬ್ಬಳ್ಳಿ: ಲೂಟಿ ಮಾಡುವ ಖಾತೆ ಸಿಗಲಿಲ್ಲ ಎಂದು ಮುಖ್ಯಮಂತ್ರಿ ಬದಲಾವಣೆಗೆ ಸಿ.ಪಿ. ಯೋಗೇಶ್ವರ ಮುಂದಾಗಿದ್ದಾರೆ ಎಂದು ಬಿಜೆಪಿ ಶಾಸಕ‌‌ ರೇಣುಕಾಚಾರ್ಯ ಹೇಳಿದ್ದಾರೆ. ಇದು ಬಿಜೆಪಿ ಆಡಳಿತ ವೈಖರಿ ತೋರಿಸುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಸಂಪೂರ್ಣ ವಿಫಲರಾಗಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಸಮರ್ಥರಿಲ್ಲ‌ ಎಂದು ಅವರನ್ನೇ ಮುಂದುವರೆಸಲಾಗುತ್ತಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಜನರು ಕೋವಿಡ್ ನಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸಬೇಕಿದ್ದ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ಅತ್ಯಾಚಾರ ಪ್ರಕರಣದಲ್ಲಿ ರಮೇಶ ಜಾರಕಿಹೊಳಿಯನ್ನು ತಕ್ಷಣ ಬಂಧಿಸಬೇಕು. ಅವರ ರಕ್ಷಣೆಗೆ ನಿಂತಿರುವ ಸಚಿವ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು. ಹೇಳಿಕೆ ಕೊಟ್ಟ‌ ಮೇಲೂ ಆರೋಪಿಯನ್ನು ಯಾಕೆ ಬಂಧಿಸಿಲ್ಲ. ದೇಶದಲ್ಲಿ ಇಂತಹ ಬೆಳವಣಿಗೆ ಎಲ್ಲಿಯಾದರೂ ನೋಡಲು ಸಾಧ್ಯಾನಾ ಎಂದು ಪ್ರಶ್ನಿಸಿದರು.

ಅತ್ಯಾಚಾರ ಆರೋಪಿ ಗೃಹ ಸಚಿವರನ್ನು ನೇರವಾಗಿ ಭೇಟಿಯಾಗುತ್ತಾರೆ. ತನಿಖಾಧಿಕಾರಿಯನ್ನು ರಜೆ ಮೇಲೆ ಕಳಿಸಿದ್ದರ ಅರ್ಥ ಏನು ಎಂದು ಕೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.