ADVERTISEMENT

ಶಾಸಕರ ವಿರುದ್ಧದ ಬಾಕಿ ಪ್ರಕರಣ: ವಿವರ ಸಲ್ಲಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2020, 23:54 IST
Last Updated 23 ಸೆಪ್ಟೆಂಬರ್ 2020, 23:54 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ಶಾಸಕರು, ಸಂಸದರ ವಿರುದ್ಧ ಬಾಕಿ ಇರುವ ಪ್ರಕರಣಗಳ ಕುರಿತು ವಿವರ ಒದಗಿಸುವಂತೆ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ಪ್ರಕರಣಗಳ ವಿಚಾರಣೆ ಮೇಲ್ವಿಚಾರಣೆಗೆ ಸ್ವಯಂ ಪ್ರೇರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.

‘ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕಣಗಳ ವಿಚಾರಣೆ ನಡೆಸಲುನಗರದ ಸಿಟಿ ಸಿವಿಲ್ ನ್ಯಾಯಾಲಯಗಳ ಆವರಣದಲ್ಲಿ ಒಂದು ವಿಶೇಷ ನ್ಯಾಯಾಲಯ ಮಾತ್ರ ಇದೆ.ಇಲ್ಲಿ ಬಾಕಿ ಇರುವ ಪ್ರಕರಣಗಳ ಸಂಖ್ಯೆ, ಅವು ಯಾವ ಹಂತದಲ್ಲಿವೆ ಎಂಬುದರ ವಿವರ ಸಲ್ಲಿಸಬೇಕು’ ಎಂದು ಪೀಠ ತಿಳಿಸಿತು.

ADVERTISEMENT

ಸಾಕ್ಷ್ಯಗಳ ವಿಚಾರಣೆಗೆ ಸಂಬಂಧಿಸಿದಂತೆ ಹೊರಡಿಸಲಾದ ಮಾರ್ಗದರ್ಶಿ ಸೂತ್ರಗಳ (ಎಸ್‌ಒಪಿ) ಪ್ರಕಾರ ನ್ಯಾಯಾಲಯವನ್ನು ಮಾರ್ಪಡಿಸಬೇಕು. ಅಡ್ವೊಕೇಟ್ ಜನರಲ್ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗೆ ಸಹಾಯ ಮಾಡಲು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ನೋಡಲ್ ಅಧಿಕಾರಿಯಾಗಿ ನೇಮಿಸುವಂತೆಯೂ ತಿಳಿಸಿದ ಪೀಠ, ಅಕ್ಟೋಬರ್‌ 5ಕ್ಕೆ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.