ADVERTISEMENT

ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿಕುಮಾರ್‌ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 19:32 IST
Last Updated 31 ಡಿಸೆಂಬರ್ 2020, 19:32 IST
ರಾಜ್ಯ ಸರ್ಕಾರದ ನಿರ್ಗಮಿತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರು ನೂತನ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಗುರುವಾರ ಅಧಿಕಾರ ಹಸ್ತಾಂತರಿಸಿದರು
ರಾಜ್ಯ ಸರ್ಕಾರದ ನಿರ್ಗಮಿತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರು ನೂತನ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಗುರುವಾರ ಅಧಿಕಾರ ಹಸ್ತಾಂತರಿಸಿದರು   

ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ 1984ನೇ ಬ್ಯಾಚ್‌ನ ಐಎಎಸ್‌ ಅಧಿಕಾರಿ ಪಿ. ರವಿಕುಮಾರ್‌ ಗುರುವಾರ ಅಧಿಕಾರ ಸ್ವೀಕರಿಸಿದರು.

ಗುರುವಾರ ಸೇವೆಯಿಂದ ನಿವೃತ್ತರಾದ ಹಾಲಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ಅವರು ಸಂಜೆ ಅಧಿಕಾರ ಹಸ್ತಾಂತರ ಮಾಡಿದರು. ರವಿಕುಮಾರ್‌ ಅವರನ್ನು ನೂತನ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿ ಬುಧವಾರ ಆದೇಶ ಹೊರಡಿಸಲಾಗಿತ್ತು.

ನಿರ್ಗಮಿತ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್‌ ಅವರಿಗೆ ಸಚಿವಾಲಯದಿಂದ ಗುರುವಾರ ಬೀಳ್ಕೊಡುಗೆ ನೀಡಲಾಯಿತು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಹಾಗೂ ಹಲವರು ಹಿರಿಯ ಐಎಎಸ್‌ ಅಧಿಕಾರಿಗಳು ಬೀಳ್ಕೊಡುಗೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.