ADVERTISEMENT

ಅರ್ಧಂಬರ್ಧ ನಿರ್ಣಯ ಮಾಡದೇ ರಾತ್ರಿ ಕರ್ಫ್ಯೂ ತೆಗೆದು ಹಾಕಬೇಕು: ಶಾಸಕ ಯತ್ನಾಳ 

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 11:23 IST
Last Updated 24 ಡಿಸೆಂಬರ್ 2020, 11:23 IST
   

ವಿಜಯಪುರ: ಕೊರೊನಾ ವೈರಸ್‌ ಹರಡುವುನ್ನು ನಿಯಂತ್ರಿಸುವ ಸಂಬಂಧ ರಾಜ್ಯ ಸರ್ಕಾರ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ಕ್ರಮಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ ಕರ್ಫ್ಯೂಗೆ ಅರ್ಥವೇ ಇಲ್ಲ. ರಾತ್ರಿ ಕರ್ಫ್ಯೂ ವಿಧಿಸಿರುವುದರಿಂದ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಜಗಳಕ್ಕೆ ಕಾರಣವಾಗಲಿದೆ. ಇಂಥ ಕಿರಿಕಿರಿಗಳಿಗೆ ಅವಕಾಶ ನೀಡುವ ಅರ್ಧಂಬರ್ಧ ನಿರ್ಣಯ ಮಾಡದೇ ರಾತ್ರಿ ಕರ್ಫ್ಯೂ ತೆಗೆದು ಹಾಕಬೇಕು ಎಂದು ಆಗ್ರಹಿಸಿದರು.

ರಾತ್ರಿ 11ರಿಂದ ಬೆಳಿಗ್ಗೆ 6ರ ವರೆಗೆ ಬಹುತೇಕರು ಮನೆಯಲ್ಲೆ ಇರುತ್ತಾರೆ. ರಾತ್ರಿ ಕರ್ಫ್ಯೂನಿಂದ ಯಾವುದೇ ಉಪಯೋಗವಿಲ್ಲ. ಕೊರೊನಾ ರಾತ್ರಿ ಹೆಚ್ಚಾಗುತ್ತೋ, ಹಗಲು ಹೆಚ್ಚಾಗುತ್ತೋ ನಮಗೂ ಗೊತ್ತಿಲ್ಲ. ವೈಜ್ಞಾನಿಕ ಮತ್ತು ವೈದ್ಯಕೀಯ ಸಲಹೆ ಪಡೆದು ನಿರ್ಧರಿಸಬೇಕು ಎಂದು ಸಲಹೆ ನೀಡಿದರು.

ADVERTISEMENT

ಒಂದು ಕಡೆ ಕ್ರಿಸ್‌ಮಸ್‌ನ ಎಲ್ಲ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಗೊಂದಲದ ಹೇಳಿಕೆ ನೀಡಿದ್ದಾರೆ. ಈ ಕೂಡಲೇ ರಾತ್ರಿ ಕರ್ಫ್ಯೂ ವಿಚಾರವನ್ನು ಮರು ಪರಿಶೀಲನೆ ಮಾಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.