ADVERTISEMENT

ಸೋಂಕಿತರ ಸಂಖ್ಯೆ 4.75 ಲಕ್ಷಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 19:55 IST
Last Updated 15 ಸೆಪ್ಟೆಂಬರ್ 2020, 19:55 IST

ಬೆಂಗಳೂರು: ರಾಜ್ಯದಲ್ಲಿ 7,576 ಮಂದಿ ಕೋವಿಡ್ ಪೀಡಿತರಾಗಿರುವುದು ಮಂಗಳವಾರ ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 4.75 ಲಕ್ಷ ತಲುಪಿದೆ.

ಈ ತಿಂಗಳು 15 ದಿನಗಳಲ್ಲಿ 1.32 ಲಕ್ಷ ಮಂದಿ ಸೋಂಕಿತರಾಗಿದ್ದಾರೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 8,857 ಮಂದಿ ಕೋವಿಡ್‌ ಪೀಡಿತರಾಗಿರುವುದು ದೃಢಪಟ್ಟದೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕು ದೃಢ ಪ್ರಮಾಣ ಶೇ 12.16ಕ್ಕೆ ಏರಿಕೆಯಾಗಿದೆ. ಆದರೆ, ಈ ತಿಂಗಳ ಬಹುತೇಕ ದಿನಗಳು 9 ಸಾವಿರದ ಗಡಿ ದಾಟಿದ್ದ ಸೋಂಕಿತರ ಸಂಖ್ಯೆ, ಈಗ ಇಳಿಕೆಯತ್ತ ಮುಖಮಾಡಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಪರೀಕ್ಷೆಗಳ ಸಂಖ್ಯೆ ಕೂಡ ಕಡಿಮೆಯಾಗಿದೆ. ಒಂದೇ ದಿನ 68,365 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.

ಕೊರೊನಾ ಸೋಂಕಿತರಲ್ಲಿ ಬೆಂಗಳೂರಿನಲ್ಲಿ 3,889 ಮಂದಿ ಸೇರಿದಂತೆ ರಾಜ್ಯದಲ್ಲಿ 7,406 ಮಂದಿಗೆ ಕಾಯಿಲೆ ವಾಸಿಯಾಗಿದೆ. ಪರಿಣಾಮ ರಾಜ್ಯದಲ್ಲಿ ಈವರೆಗೆ ಗುಣಮುಖರಾದವರ ಸಂಖ್ಯೆ 3.69 ಲಕ್ಷಕ್ಕೆ ಏರಿಕೆಯಾಗಿದೆ. ಸದ್ಯ 98 ಸಾವಿರ ಸೋಂಕಿತರು ಆಸ್ಪತ್ರೆಗಳು ಸೇರಿದಂತೆ ವಿವಿಧೆಡೆಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.