ಬೆಳಗಾವಿ: ‘ಜಿಲ್ಲೆಯಲ್ಲಿ ಮೈಕ್ರೊ ಫೈನಾನ್ಸ್ ಕಂಪನಿಗಳ ಹಾವಳಿ ಪ್ರಕರಣ ದಿನಗಳು ಕಳೆದಂತೆ ಜಟಿಲವಾಗುತ್ತಿದೆ. ಇದರ ತನಿಖೆಯನ್ನು ಸಿಐಡಿಗೆ ವಹಿಸುವುದು ಸೂಕ್ತ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
‘ಗೋಕಾಕ, ಬೆಳಗಾವಿ, ಹುಕ್ಕೇರಿ, ಸವದತ್ತಿ, ಬೈಲಹೊಂಗಲ ಸೇರಿ ಜಿಲ್ಲೆಯ ವಿವಿಧೆಡೆ ಮೈಕ್ರೊ ಫೈನಾನ್ಸ್‌ನವರು ಜನರಿಗೆ ಕಿರುಕುಳ ಕೊಡುತ್ತಿರುವುದು ಗೊತ್ತಾಗಿದೆ. ಈ ಎಲ್ಲದರ ಬಗ್ಗೆ ಪೊಲೀಸರು ಪ್ರಾಥಮಿಕ ತನಿಖೆ ನಡೆಸುತ್ತಿದ್ದು, ಇದಕ್ಕೆ ಪೂರಕವಾಗಿ ವಾರದೊಳಗೆ ಸಭೆಯನ್ನೂ ಮಾಡಲಾಗುವುದು’ ಎಂದು ಅವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
‘ಮೈಕ್ರೊ ಫೈನಾನ್ಸ್‌ನವರು ಜನರಿಗೆ ತೊಂದರೆ ಕೊಟ್ಟರೆ, ಪ್ರಕರಣ ದಾಖಲಿಸುವ ಬಗ್ಗೆ ಮುಖ್ಯಮಂತ್ರಿಯವರು ಎಚ್ಚರಿಕೆ ಕೊಟ್ಟಿದ್ದಾರೆ. ಕಿರುಕುಳ, ಅನ್ಯಾಯದ ಬಗ್ಗೆ ಜನರು ಪೊಲೀಸ್ ಠಾಣೆಗೆ ದೂರು ನೀಡಬೇಕು’ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.