ನವದೆಹಲಿ: ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೊಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ.
ರಾಜ್ಯದಲ್ಲಿ ಏಮ್ಸ್ ಸ್ಥಾಪನೆ ಕುರಿತು ಲೋಕಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಸಂಸದರಾದ ಜಿ. ಕುಮಾರ ನಾಯಕ ಹಾಗೂ ಇ. ತುಕಾರಾಮ್ ಕೇಳಿದ ಪ್ರಶ್ನೆಗೆ ಆರೋಗ್ಯ ಖಾತೆ ರಾಜ್ಯ ಸಚಿವ ಪ್ರತಾಪ್ ರಾವ್ ಜಾಧವ್ ಈ ಉತ್ತರ ನೀಡಿದ್ದಾರೆ. ಈ ಯೋಜನೆಯಡಿ ಈ ವರೆಗೆ ದೇಶದಲ್ಲಿ 22 ಏಮ್ಸ್ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಉತ್ತರಿಸಿದ್ದಾರೆ.
ಹಿಂದುಳಿದ ಜಿಲ್ಲೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎಂದು ರಾಜ್ಯ ಸರ್ಕಾರವು ಕೇಂದ್ರಕ್ಕೆ ಹಲವು ಸಲ ಪತ್ರ ಬರೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.