ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ನರ್ಸಿಂಗ್ ಮತ್ತು ಇತರ ಆರೋಗ್ಯ ಸಂಬಂಧಿತ ಕೋರ್ಸ್‌ಗಳ ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಭೌತಿಕ ತರಗತಿಗಳನ್ನು ತಕ್ಷಣವೇ ಆರಂಭಿಸಲು ಸರ್ಕಾರ ಅನುಮತಿ ನೀಡಿದೆ.
ಈ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.
ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರುವ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಅವರು ಕಾಲೇಜು ಮತ್ತು ಶಿಕ್ಷಣ ಸಂಸ್ಥೆಗಳನ್ನು ಪ್ರವೇಶಿಸಲು ಅವಕಾಶ ನೀಡಲಾಗಿದೆ. ಕಾಲೇಜುಗಳು ಮತ್ತು ಶಿಕ್ಷಣ ಸಂಸ್ಥೆಗಳು ಕಟ್ಟು ನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ಶಿಕ್ಷೆಗೆ ಒಳಗಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.