ADVERTISEMENT

ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ಸಡಿಲ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2021, 16:59 IST
Last Updated 9 ಸೆಪ್ಟೆಂಬರ್ 2021, 16:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್ ದೃಢೀಕರಣ ಪ್ರಮಾಣ ಶೇ. 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಸಡಿಸಲು ಸೂಚಿಸಲಾಗಿದೆ.

ಈ ಸಂಬಂಧ ಪರಿಷ್ಕೃತ ಮಾರ್ಗಸೂಚಿಯನ್ನು ಗುರುವಾರ ರಾತ್ರಿ ಹೊರಡಿಸಲಾಗಿದೆ.

ಕೋವಿಡ್ ಪರಿಸ್ಥಿತಿ ನೋಡಿಕೊಂಡು ಆಯಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಸೂಕ್ತ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ADVERTISEMENT

ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಕೂಲ ಮಾಡಿಕೊಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವ್ಯಾಖ್ಯಾನಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.