ಡಿ.ಕೆ ಶಿವಕುಮಾರ್
- ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಜಲಸಂಪನ್ಮೂಲ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ. ನಮಗೆ ತುರ್ತಾಗಿ ಎಂಜಿನಿಯರ್‌ಗಳು ಬೇಕು. ಹೀಗಾಗಿ, ನನ್ನ ಇಲಾಖೆಯಿಂದ ಯಾರನ್ನೂ ಬೇರೆಡೆಗೆ ಕಳಿಸಬೇಡಿ ಎಂದು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ತಮ್ಮ ಅನುಮತಿ ಪಡೆಯದೆ ಮುಖ್ಯ ಎಂಜಿನಿಯರ್‌ಗಳ ವರ್ಗಾವಣೆಗೆ ಆಕ್ಷೇಪ ವ್ಯಕ್ತಪಡಿಸಿ ಮುಖ್ಯ ಕಾರ್ಯದರ್ಶಿಗೆ ಬರೆದ ಪತ್ರದ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ‘ಜಲಸಂಪನ್ಮೂಲ ಇಲಾಖೆಗೆ ಬಂದು ಬಡ್ತಿ ಪಡೆದು ನಂತರ ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ ಸೇರಿದಂತೆ ಇತರ ಇಲಾಖೆಗಳಿಗೆ ವರ್ಗಾವಣೆ ಪಡೆಯುತ್ತಾರೆ’ ಎಂದು ಸ್ಪಷ್ಟನೆ ನೀಡಿದರು.
‘ನಿಮ್ಮ ಅನುಮತಿ ಇಲ್ಲದೆ ಯಾರು ವರ್ಗಾವಣೆ ಮಾಡಿದ್ದಾರೆ’ ಎಂದು ಕೇಳಿದಾಗ, ‘ಉನ್ನತ ಮಟ್ಟದಲ್ಲಿ ಈ ರೀತಿ ವರ್ಗಾವಣೆ ಮಾಡಲು ಅವಕಾಶ ಇದೆ. ಅನೇಕ ಶಾಸಕರು ತಮಗೆ ಬೇಕಾದವರನ್ನು ಬೇರೆ ಇಲಾಖೆಗೆ ಕಳುಹಿಸಿಕೊಡಿ ಎಂದು ಒತ್ತಡ ಹಾಕುತ್ತಾರೆ. ಜಲಸಂಪನ್ಮೂಲ ಇಲಾಖೆಯಲ್ಲಿ ಕೆಲಸ ಮಾಡಲು ಎಂಜಿನಿಯರ್‌ಗಳು ಮುಂದೆ ಬರುತ್ತಿಲ್ಲ. ಈ ದೃಷ್ಟಿಯಿಂದ ನನ್ನ ಗಮನಕ್ಕೆ ತರದೆ ಯಾರನ್ನೂ ವರ್ಗಾವಣೆ ಮಾಡಬೇಡಿ ಎಂದು ಸೂಚನೆ ನೀಡಿದ್ದೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.