ಎಚ್.ಡಿ.ದೇವೇಗೌಡ ಪ್ರಧಾನಿ ಆಗಿದ್ದರು. ಅದಕ್ಕೂ ಮುಂಚಿನ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿ ಎಂದು ಪ್ರಚಾರ ಮಾಡಲಾಗಿತ್ತೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಚಿಕ್ಕಮಗಳೂರಿನ ತರೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವರು ಪ್ರಧಾನಿಯಾದಾಗ ನಾನೂ ಅವರ ಜೊತೆಯಲ್ಲೇ ಇದ್ದೆ. ಕಾಂಗ್ರೆಸ್ ಬೆಂಬಲದಿಂದ ಆಕಸ್ಮಿಕವಾಗಿ ಪ್ರಧಾನಿಯಾದರು. ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಇಲ್ಲ. ಘೋಷಣೆ ಮಾಡಿದರೆ ತಲೆಬಾಗುವೆ ಎಂದು ಈಗ ರಾಜಕೀಯಕ್ಕೆ ಮಾತನಾಡುತ್ತಿದ್ದಾರೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.