ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ
ಬೆಂಗಳೂರು: 'ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್ ಇದೆ, ಇಬ್ಬರೂ ವಿಶ್ವಾಸದಲ್ಲೇ ಇದ್ದಾರೆ' ಎಂದು ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಸ್ಥ, ಡಿ.ಕೆ. ಶಿವಕುಮಾರ್ ಪಕ್ಷದ ಮುಖ್ಯಸ್ಥ. ಎಲ್ಲರೂ ಕೂಡಿಯೇ ಹೋಗುತ್ತಿದ್ದೇವೆ. ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವೂ ಇಲ್ಲ' ಎಂದರು.
'ನಾನು ಪಕ್ಷದಲ್ಲಿ ಹಿರಿಯನಿದ್ದೇನೆ. ನಾನು 9 ಬಾರಿ ವಿಧಾನಸಭೆಗೆ ಆರಿಸಿ ಬಂದಿದ್ದೇನೆ. ನಾನು ಈಗ ಮುಖ್ಯಮಂತ್ರಿ ಸ್ಥಾನಕ್ಕೆ ಆಕಾಂಕ್ಷಿ ಅಲ್ಲ. ಪರಿಸ್ಥಿತಿ ಬಂದಾಗ ನೋಡೋಣ' ಎಂದರು.
ದಲಿತ ಸಚಿವರ ಔತಣಕೂಟ ಸಭೆಯ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, 'ಸಭೆ ಕರೆಯುವುದರಲ್ಲಿ ತಪ್ಪೇನಿದೆ? ಯಾರು ಬೇಕಾದರೂ ಔತಣಕೂಟ ಸಭೆ ಮಾಡಬಹುದು. ಅದಕ್ಕೂ ರಾಜಕೀಯಕ್ಕೂ ಏನು ಸಂಬಂಧ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.