ADVERTISEMENT

ಮುಖ್ಯ ಶಿಕ್ಷಕರಿಗಿಲ್ಲ ಇನ್ನು ಕೋವಿಡ್‌ ಕರ್ತವ್ಯ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2020, 18:59 IST
Last Updated 17 ಆಗಸ್ಟ್ 2020, 18:59 IST

ಬೆಂಗಳೂರು: ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮುಖ್ಯ ಶಿಕ್ಷಕರನ್ನು ಕೋವಿಡ್‌ ಕರ್ತವ್ಯದಿಂದ ಮುಕ್ತಗೊಳಿಸುವಂತೆ ಇಲಾಖೆಯ ಆಯುಕ್ತರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ಸೂಚಿಸಿದ್ದಾರೆ.

'ವಿದ್ಯಾರ್ಥಿಗಳ ಕಲಿಕೆಯನ್ನು ಮುಂದುವರಿಸುವ ದೂರದೃಷ್ಟಿ ಯೋಜನೆಯಾದ ‘ವಿದ್ಯಾಗಮ’ ಮತ್ತು ಮಧ್ಯಾಹ್ನ ಉಪಾಹಾರ ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಮುಖ್ಯ ಶಿಕ್ಷಕರು ಶಾಲೆಗಳಲ್ಲಿ ಅವಶ್ಯಕ. ಹೀಗಾಗಿ, ಅವರನ್ನು ಕೋವಿಡ್‌ ಕರ್ತವ್ಯದಿಂದ ಮುಕ್ತಗೊಳಿಸಬೇಕು’ ಎಂದೂ ಸಚಿವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT