ADVERTISEMENT

ರಾಜ್ಯ ರಾಜಕಾರಣದ ಚರ್ಚೆಯಾಗಿಲ್ಲ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2025, 0:25 IST
Last Updated 17 ನವೆಂಬರ್ 2025, 0:25 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

ಬೆಳಗಾವಿ: ‘ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾಗಿ ಸುನೀಲ ಹನುಮಣ್ಣವರ ಆಯ್ಕೆಯಾದ ಹಿನ್ನೆಲೆಯಲ್ಲಿ ಅಭಿನಂದಿಸಲು ದೆಹಲಿಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಭೇಟಿಯಾಗಿದ್ದೇವೆಯೇ ಹೊರತು, ರಾಜ್ಯ ರಾಜಕಾರಣದ ಬಗ್ಗೆ ಚರ್ಚಿಸಿಲ್ಲ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಯಕತ್ವ ಗೊಂದಲದ ವಿಚಾರವಾಗಿ ಎಲ್ಲ ವಿದ್ಯಮಾನಗಳನ್ನು ವರಿಷ್ಠರು ಗಮನಿಸುತ್ತಿದ್ದಾರೆ. ಈ ಬಗ್ಗೆ ಅವರೇ ಸ್ಪಷ್ಟಪಡಿಸಿದರೆ ಉತ್ತಮ’ ಎಂದರು.

ADVERTISEMENT

‘ಸತೀಶ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷರಾಗಲಿದ್ದಾರೆ’ ಎಂದು ಚರ್ಚೆ ನಡೆಯುತ್ತಿರುವ ಕುರಿತು ಪ್ರತಿಕ್ರಿಯಿಸಿದ ಸತೀಶ, ‘ಹೀಗೆ ಚರ್ಚೆ ನಡೆಯುವುದು ಸ್ವಾಭಾವಿಕ. ಅದಕ್ಕೆ ಕಡಿವಾಣ ಹಾಕಲಾಗದು’ ಎಂದರು. 

‘ಬಿಹಾರ ವಿಧಾನಸಭೆಯಲ್ಲಿ ಗೆಲ್ಲುತ್ತೇವೆ ಎಂಬ ನಮ್ಮ ಆಶಯ ಈಡೇರಿಲ್ಲ. ಇವಿಎಂ ಕುರಿತಾಗಿ ಅನುಮಾನ ಸದಾ ಇದೆ. ಕೇಂದ್ರ ಸರ್ಕಾರ ಮತ್ತು ಚುನಾವಣೆ ಆಯೋಗ ಈ ಬಗ್ಗೆ ಸ್ಪಷ್ಟಪಡಿಸಬೇಕು’ ಎಂದು ಆಗ್ರಹಿಸಿದರು.

‘ಬೆಳಗಾವಿಯಲ್ಲಿ ಡಿ.8ರಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.