ADVERTISEMENT

ಶಾಲೆಗಳಲ್ಲಿ ಅಂತರ ಕಾಯ್ದುಕೊಳ್ಳುವ ಬಗ್ಗೆ ಅಂತಿಮ ಆದೇಶವಾಗಿಲ್ಲ: ಆಯುಕ್ತರು

​ಪ್ರಜಾವಾಣಿ ವಾರ್ತೆ
Published 16 ಮೇ 2020, 12:19 IST
Last Updated 16 ಮೇ 2020, 12:19 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಅಂತರ ಕಾಯ್ದುಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು
ಕಳುಹಿಸಿರುವ ಟಿಪ್ಪಣಿಯನ್ನು ಉಲ್ಲೇಖಿಸಿ ವಿವಿಧ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿರುವ ಸುದ್ದಿಗಳ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ಈ ವಿಷಯಗಳು ಕೇವಲ ಚರ್ಚೆಯಲ್ಲಿವೆ. ಆದರೆ, ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಆಯುಕ್ತರುಸ್ಪಷ್ಟೀಕರಣ ನೀಡಿದ್ದಾರೆ.

ಇದು ಯಾವುದೇ ಅಧಿಕೃತ ಆದೇಶ ಅಥವಾ ಸುತ್ತೋಲೆಯಾಗಿರುವುದಿಲ್ಲ. ಈ ಸಂಬಂಧ ಇಲಾಖೆಯಲ್ಲಿ ಈವರೆವಿಗೂ ಯಾವುದೇ ಅಂತಿಮ ನಿರ್ಧಾರಗಳನ್ನು ತೊಗೆದುಕೊಂಡಿಲ್ಲ ಎಂದು ಸ್ಫಷ್ಟೀಕರಿಸಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.