ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಪಕ್ಷದಲ್ಲಿ ಆಂತರಿಕ ಜಗಳ ಇಲ್ಲ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಹೇಳಿಕೆ ನಿರ್ಲಕ್ಷಿಸುವುದೇ ಒಳ್ಳೆಯದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ರಾಜಣ್ಣ ಹೇಳಿದ್ದರೆ, ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ. ಇಂತಹ ಹೇಳಿಕೆಗಳನ್ನು ಹೇಗಾದರೂ ಅರ್ಥೈಸಿಕೊಳ್ಳಬಹುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.