ADVERTISEMENT

ಮೋದಿ ಬಿಟ್ಟರೆ ಯಾರಿಗೂ ಪ್ರಧಾನಿ ಆಗುವ ಯೋಗ್ಯತೆ ಇಲ್ಲ: ಎಚ್.ಡಿ. ದೇವೇಗೌಡ

ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2024, 9:18 IST
Last Updated 23 ಏಪ್ರಿಲ್ 2024, 9:18 IST
<div class="paragraphs"><p>ಎಚ್.ಡಿ. ದೇವೇಗೌಡ</p></div>

ಎಚ್.ಡಿ. ದೇವೇಗೌಡ

   

ಹಾರೋಹಳ್ಳಿ: ಮೋದಿ ಬಿಟ್ಟರೆ ಯಾರಿಗೂ ಈ ದೇಶದ ಪ್ರಧಾನಿಯಾಗುವ ಯೋಗ್ಯತೆ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ಮರಳವಾಡಿಯಲ್ಲಿ ಬಿಜೆಪಿ ಅಭ್ಯರ್ಥಿ, ತಮ್ಮ ಅಳಿಯ ಸಿ.ಎನ್. ಮಂಜುನಾಥ್ ಪರವಾಗಿ ಮಂಗಳವಾರ ಮತಯಾಚನೆ ನಡೆಸಿ ಅವರು ಮಾತನಾಡಿದರು.

ADVERTISEMENT

ಈ ಕ್ಷೇತ್ರದಲ್ಲಿ ಅವರಿಗೆ (ಡಿ.ಕೆ ಸಹೋದರರಿಗೆ) ಸೆಡ್ಡು ಹೊಡೆಯಬೇಕು. ಯಾರಿಗೂ ಹೆದರಬೇಡಿ. ಅವರ ಹೆಸರು ಹೇಳುವುದಿಲ್ಲ. ಈ ಸಲ ಅವರ ಅಂತ್ಯ ಆಗಲೇಬೇಕು ಎಂಬ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಡಾ. ಮಂಜುನಾಥ್ ಅವರನ್ನು ಚುನಾವಣೆಗೆ ನಿಲ್ಲಿಸಿದ್ದೇವೆ. ಹಾಗಾಗಿ, ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಕುಮಾರಸ್ವಾಮಿ ಅವರು ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ರಚನೆ ಮಾಡಿ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ₹25 ಸಾವಿರ ಕೋಟಿ ಸಾಲ ಮನ್ನಾ ಮಾಡಿದ ಏಕೈಕ ಮುಖ್ಯಮಂತ್ರಿ ಅಂದರೆ ಅದು ಕುಮಾರಸ್ವಾಮಿ. ಮೋದಿ ಅವರು, ಮಂಡ್ಯಡಲ್ಲಿ ಕುಮಾರಸ್ವಾಮಿಯನ್ನು ನಿಲ್ಲಿಸಲು ಹೇಳಿದರು. ಕೇಂದ್ರದಲ್ಲಿ ಅವರ ಸೇವೆ ಬಳಸಿಕೊಳ್ಳಲು ಅಲ್ಲಿ ಅವರನ್ನು ನಿಲ್ಲಿಸಲಾಗಿದೆ ಎಂದರು.

ಡಾ. ಮಂಜುನಾಥ್ 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ. ಅವರ ಸೇವೆಯನ್ನು ಮೋದಿ ಮತ್ತು ಅಮಿತ್ ಶಾ ಅವರು ರಾಷ್ಟ್ರಮಟ್ಟದಲ್ಲಿ ಬಳಸಿಕೊಳ್ಳುವುದಕ್ಕಾಗಿ, ಅವರನ್ನು ಸಚಿವರನ್ನಾಗಿ ಮಾಡುತ್ತೇವೆ ಎಂದು ಚುನಾವಣೆಗೆ ನಿಲ್ಲಿಸಲು ಒಪ್ಪಿಸಿದರು. ಜನಸೇವೆ ಮಾಡಿ ಮನೆ‌ ಮಾತಾಗಿರುವ ಪ್ರಾಮಾಣಿಕ ಮಂಜುನಾಥ್ ಅವರಿಗೆ ಜನ ಮತ ನೀಡಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.