ADVERTISEMENT

ಗ್ಯಾರಂಟಿ ಯೋಜನೆ ಕೈಬಿಡುವ ಮಾತೇ ಇಲ್ಲ: ಎಂ.ಬಿ.ಪಾಟೀಲ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2024, 12:17 IST
Last Updated 15 ಆಗಸ್ಟ್ 2024, 12:17 IST
<div class="paragraphs"><p>ಎಂ.ಬಿ.ಪಾಟೀಲ</p></div>

ಎಂ.ಬಿ.ಪಾಟೀಲ

   

ವಿಜಯಪುರ: ರಾಜ್ಯ ಕಾಂಗ್ರೆಸ್‌ ಸರ್ಕಾರ ಜನರಿಗೆ ಕೊಟ್ಟಿರುವ ಮಾತಿನಂತೆ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಲಾಭ ಪಡೆದುಕೊಳ್ಳುತ್ತಿರುವ ಅನರ್ಹರು, ಶ್ರೀಮಂತರನ್ನು ಕೈಬಿಡುವ ನಿಟ್ಟಿನಲ್ಲಿ ಪರಿಷ್ಕರಣೆ ಮಾಡುವುದರಲ್ಲಿ ತಪ್ಪೇನಿಲ್ಲ. ಆ ಹಣವನ್ನು ಅಭಿವೃದ್ಧಿ ಕಾರ್ಯಕ್ಕೆ ಬಳಸಿಕೊಳ್ಳಲು ಅನುಕೂಲವಾಗಲಿದೆ ಎಂದರು.

ADVERTISEMENT

ಗ್ಯಾರಂಟಿ ಯೋಜನೆ ವ್ಯಾಪ್ತಿಯಿಂದ ಒಬ್ಬೇಒಬ್ಬ ಬಡವನನ್ನು ಕೈಬಿಡುವ ಮಾತು ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.

‘ಬಿಜೆಪಿ ಹಗರಣ ತನಿಖೆಗೆ ಪಾದಯಾತ್ರೆ ಮಾಡಲಿ’

ಕೂಡಲಸಂಗಮದಿಂದ ಬಳ್ಳಾರಿವರೆಗೆ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ನಡೆಸಲು ಉದ್ದೇಶಿರುವ ಪಾದಯಾತ್ರೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಬಿ.ಎಸ್‌.ಯಡಿಯೂರಪ್ಪ,ಆರ್‌. ಸುಧಾಕರ್‌ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಈ ಹಿಂದೆ ಮಾಡಿರುವ ಆರೋಪಗಳ ತನಿಖೆಗಾಗಿ ಪಾದಯಾತ್ರೆ ಮಾಡುವುದು ಹೆಚ್ಚು ಸೂಕ್ತ ಎಂದು ಕುಟುಕಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.