ADVERTISEMENT

ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಇಲ್ಲ: ಡಿಸಿಎಂ ಅಶ್ವತ್ಥನಾರಾಯಣ

ವಿವೇಕಾನಂದರ ಜಯಂತಿ ಆಚರಣೆ ನಾಳೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 19:45 IST
Last Updated 10 ಜನವರಿ 2020, 19:45 IST
ಅಶ್ವತ್ಥ ನಾರಾಯಣ
ಅಶ್ವತ್ಥ ನಾರಾಯಣ   

ಬೆಂಗಳೂರು: ‘ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆಯೇ ಇಲ್ಲ. ಸಂಪರ್ಕ ಕೊರತೆ ಯಿಂದ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಯುವಜನರಿಗೆ ಸಾಧ್ಯವಾಗುತ್ತಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಇದೇ 12ರಂದು ವಿವೇಕಾನಂದರ ಜಯಂತಿ ಆಚರಣೆ ಸಲುವಾಗಿ ಮಾಹಿತಿ ನೀಡಲು ಶುಕ್ರವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಶೇ 106ರಷ್ಟು ಉದ್ಯೋಗ ಅವಕಾಶಗಳು ಇವೆ. ಪ್ರೌಢಶಾಲೆ, ಕಾಲೇಜುಗಳಲ್ಲಿ ಯುವ ಸಬಲೀಕರಣ ಕೇಂದ್ರಗಳನ್ನು ತೆರೆದು ಉದ್ಯೋಗ ಮಾಹಿತಿ ನೀಡುವ ಕಾರ್ಯ ಕ್ರಮ ರೂಪಿಸಲಾಗುತ್ತಿದೆ. ಉದ್ಯೋಗ ಮಾಹಿತಿ ಸಲುವಾಗಿ ಪ್ರೌಢಶಾಲೆ ಹಾಗೂ ಕಾಲೇಜುಗಳನ್ನು ಒಂದೇ ವೇದಿಕೆಗೆ ತರಲಾಗುವುದು ಎಂದರು.

ADVERTISEMENT

ಒಂದು ಲಕ್ಷ ಲ್ಯಾಪ್‌ಟಾಪ್ ವಿತರಣೆ: ಜ. 12ರಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತವಾಗಿ ಲ್ಯಾಪ್‌ಟಾಪ್ ವಿತರಿ ಸಲಾಗುವುದು. ಒಟ್ಟು ಒಂದು ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಡಲಾಗುತ್ತದೆ ಎಂದು ಹೇಳಿದರು.

ವಿವೇಕಾನಂದ ಜಯಂತಿ; ಲಕ್ಷ ಲ್ಯಾಪ್‌ಟಾಪ್ ವಿತರಣೆ

ಜ. 12ರಂದು ಸ್ವಾಮಿ ವಿವೇಕಾನಂದರ ಜಯಂತಿಯನ್ನು ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ ಎಂದು ಸಿ.ಎಸ್.ಅಶ್ವತ್ಥನಾರಾಯಣ ತಿಳಿಸಿದರು.

ಈ ಕಾರ್ಯಕ್ರಮಗಳಲ್ಲಿ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಲಾಗುವುದು. ಒಟ್ಟಾರೆಯಾಗಿ ರಾಜ್ಯದಲ್ಲಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಕೊಡಲಾಗುತ್ತದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.