ADVERTISEMENT

‘ಅಂತರರಾಜ್ಯ ಸಾರಿಗೆ ಆರಂಭಕ್ಕೆ ಚಿಂತನೆ’: ಸಾರಿಗೆ ಸಚಿವ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 13:34 IST
Last Updated 23 ಜೂನ್ 2020, 13:34 IST
ಸಾರಿಗೆ ಸಚಿವ ಲಕ್ಷ್ಮಣ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ   

ರಾಯಚೂರು: ಮಹಾರಾಷ್ಟ್ರವೊಂದನ್ನು ಹೊರತುಪಡಿಸಿ ನೆರೆಯ ರಾಜ್ಯಗಳಿಗೆ ಬಸ್‌ ಸಂಚಾರ ಆರಂಭಿಸುವುದಕ್ಕೆ ಸಂಬಂಧಿಸಿ ಅಲ್ಲಿಗೆ ಪತ್ರ ಬರೆಯಲಾಗಿದೆ ಎಂದು ಸಾರಿಗೆ ಸಚಿವರೂ ಆದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ಮಂಗಳವಾರ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಗೋವಾ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ತಮಿಳುನಾಡಿಗೆ ಪತ್ರ ಬರೆಯಲಾಗಿದ್ದು, ಶೀಘ್ರದಲ್ಲೆ ಅಂತರರಾಜ್ಯ ಬಸ್‌ ಸೇವೆ ಆರಂಭಿಸಲು ಚಿಂತನೆ ನಡೆದಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.