ಶಿವಮೊಗ್ಗ:ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಬಳಿ ಶತಮಾನದಷ್ಟು ಹಳೆಯದಾದ ಕಿರು ಸೇತುವೆ ಕುಸಿದಿದ್ದು, ಆಗುಂಬೆ–ಉಡುಪಿ, ಶೃಂಗೇರಿ–ಮಂಗಳೂರು ಮಾರ್ಗದ ಸಂಚಾರ ಬಂದ್ ಆಗಿದೆ.
ಸುಟ್ಟ ಇಟ್ಟಿಗೆಯಿಂದಲೇ ಕಟ್ಟಲಾಗಿದ್ದ ಈ ಸೇತುವೆ ಈಚೆಗೆ ಸುರಿದ ಭಾರಿ ಮಳೆಗೆ ಶಿಥಿಲಗೊಂಡಿತ್ತು. ಸ್ಥಳೀಯರು ದೂರು ನೀಡಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ದುರಸ್ತಿಗೆ ಕ್ರಮ ಕೈಗೊಂಡಿರಲಿಲ್ಲ. ಗುರುವಾರ ಸೇತುವೆಯ ಮಧ್ಯ ಭಾಗ ಕುಸಿದಿದೆ. ಹಾಗಾಗಿ, ರಾಷ್ಟ್ರೀಯ ಹೆದ್ದಾರಿ–169ರ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.
‘ಸೇತುವೆ ದುರ್ಬಲವಾಗಿದ್ದ ಕಾರಣ ಪಕ್ಕದಲ್ಲೇ ಹೊಸ ಸೇತುವೆ ನಿರ್ಮಿಸಲಾಗುತ್ತಿತ್ತು. ಅದು ಇನ್ನೂ ಪೂರ್ಣಗೊಂಡಿಲ್ಲ. ಹಾಗಾಗಿ, ಬದಲಿ ಮಾರ್ಗ ಸೂಚಿಸಲಾಗಿದೆ. ಎರಡು ದಿನಗಳ ಒಳಗೆ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದು ಎಂಜಿನಿಯರ್ನಾಗರಾಜ್ ನಾಯ್ಕ ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.