ಮೈಸೂರು: ಕೋವಿಡ್ ಕಾರಣ ಅನಿವಾರ್ಯವಾಗಿ ಈ ಬಾರಿ ಬಜೆಟ್ ಗಾತ್ರ ಕಡಿಮೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶನಿವಾರ ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 'ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯ. ಪರಿಸ್ಥಿತಿ ಅವಲೋಕಿಸಿ ಹಣ ಮೀಸಲಿಡಲಾಗುವುದು' ಎಂದರು.
ರಾಜ್ಯದಲ್ಲಿ ಕೋವಿಡ್ ಸಮಸ್ಯೆ ಶೇ 90ರಷ್ಟು ಕಡಿಮೆ ಆಗಿದೆ. ಕೋವಿಡ್‌ಗೆ ಬೇಕಾಗಿರುವಷ್ಟು ಹಣಕಾಸು ನೆರವನ್ನು ನೀಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.