ಗದಗ: ತೋಂಟದಾರ್ಯ ಸಿದ್ಧಲಿಂಗ ಸ್ವಾಮೀಜಿ ಅವರ ಪಾರ್ಥೀವ ಶರೀರವನ್ನು ಮಠದ ಆವರಣದಲ್ಲಿ ಭಾನುವಾರ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ.
ಮಧ್ಯಾಹ್ನ 1 ಗಂಟೆಯವರೆಗೂ ಗಣ್ಯರು ಮತ್ತು ಸಾರ್ವಜನಿಕರು ಸಿದ್ಧಲಿಂಗ ಸ್ವಾಮೀಜಿಯ ಅಂತಿಮ ದರ್ಶನ ಪಡೆಯಲಿದ್ದಾರೆ.ಬಳಿಕ ಗದಗ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವುದು. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮಠದ ಮೂಲಗಳು ತಿಳಿಸಿವೆ.
ಸಾರ್ವಜನಿಕರು, ಲಿಂಗಾಯತ ಸಮುದಾಯದ ಭಕ್ತರು, ವಿವಿಧ ಮಠಗಳ ಮಠಾಧೀಶರು ಸಿದ್ಧಲಿಂಗ ಸ್ವಾಮಿಜಿಯವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಗದಗಕ್ಕೆ ಆಗಮಿಸಿ ಸ್ವಾಮೀಜಿಯ ಅಂತಿಮ ದರ್ಶನ ಪಡೆಯಲಿದ್ದಾರೆ.
ಮಠದ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಇವನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.