ADVERTISEMENT

ಪಾದಯಾತ್ರೆಗೆ ಹರಿದುಬಂದ ಜನಸಾಗರ: ಮೈಸೂರು ರಸ್ತೆಯುದ್ದಕ್ಕೂ ಸಂಚಾರ ದಟ್ಟಣೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2022, 5:21 IST
Last Updated 1 ಮಾರ್ಚ್ 2022, 5:21 IST
ಪಾದಯಾತ್ರೆಯ ಎರಡನೇ ದಿನದ ಚಿತ್ರ
ಪಾದಯಾತ್ರೆಯ ಎರಡನೇ ದಿನದ ಚಿತ್ರ   

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಮಂಗಳವಾರ ಜನಸಾಗರವೇ ಹರಿದುಬಂದಿದೆ. ಸಾವಿರಾರು ಜನರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿರುವುದರಿಂದ ಮೈಸೂರುರಸ್ತೆಯುದ್ದಕ್ಕೂ ಸಂಚಾರ ದಟ್ಟಣೆ ಸೃಷ್ಟಿಯಾಗಿದೆ.

ಬೆಂಗಳೂರಿನ ಹಲವು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಬಂದಿರುವ ಜನರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಕಿಲೋಮೀಟರ್ ಗಟ್ಟಲೆ ಜನದಟ್ಟಣೆ ಕಂಡುಬರುತ್ತಿದೆ.

ಮೈಸೂರು ರಸ್ತೆಯ ಒಂದು ಭಾಗದಲ್ಲಿ ಪಾದಯಾತ್ರೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಇನ್ನೊಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಲವು ಜಂಕ್ಷನ್‌ಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ADVERTISEMENT

ನೀರು, ಕಬ್ಬಿನ ಹಾಲು:ಪಾದಯಾತ್ರೆ ಸಂಚರಿಸುವ ಮಾರ್ಗದಲ್ಲಿ ಅಲ್ಲಲ್ಲಿ ಅರವಟಿಗೆಗಳನ್ನು ಸ್ಥಾಪಿಸಲಾಗಿದೆ.‌ ಕುಡಿಯುವ‌ ನೀರು ಮತ್ತು ಕಬ್ಬಿನ ಹಾಲು ವಿತರಿಸಲಾಗುತ್ತಿದೆ.

ಕಬ್ಬಿನ ಹಾಲು ವಿತರಣೆಗಾಗಿ ಲಾರಿಗಳಲ್ಲಿ ಕಬ್ಬಿನ ಜಲ್ಲೆಗಳನ್ನು ತರಲಾಗಿದೆ.

ಜೆಸಿಬಿ ಬಳಸಿ ಹೂಮಳೆ:ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಹಾದು ಬರುವಾಗ ಜೆಸಿಬಿಗಳನ್ನು ಬಳಸಿ ಹೂಮಳೆಗರೆಯಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.