ADVERTISEMENT

ಅನಂತಕುಮಾರ್‌ ಹೆಗಡೆಗೆ ಬೆದರಿಕೆ ಕರೆ

ಶಿರಸಿಯಲ್ಲಿ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 20:03 IST
Last Updated 18 ಫೆಬ್ರುವರಿ 2019, 20:03 IST
ಅನಂತಕುಮಾರ ಹೆಗಡೆ
ಅನಂತಕುಮಾರ ಹೆಗಡೆ   

ಶಿರಸಿ: ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಮನೆಯ ಸ್ಥಿರ ದೂರವಾಣಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿ, ಜೀವ ಬೆದರಿಕೆ ಹಾಕಿರುವ ಸಂಬಂಧ ಇಲ್ಲಿನ ಮಾರುಕಟ್ಟೆ ಠಾಣೆಯಲ್ಲಿ ಭಾನುವಾರ ತಡರಾತ್ರಿ ಪ್ರಕರಣ ದಾಖಲಾಗಿದೆ.

ಫೆ.16ರ ರಾತ್ರಿ 1.45ರ ಸುಮಾರಿಗೆ 0022330000 ಈ ಸಂಖ್ಯೆಯಿಂದ ಕರೆ ಬಂದಿದೆ. ಸಚಿವರು ಮೃತ ಯೋಧರ ಕುಟುಂಬಕ್ಕೆ ಸಾಂತ್ವನ ಹೇಳಲು ತಮಿಳುನಾಡಿಗೆ ಹೋಗಿದ್ದರಿಂದ ಅವರ ಪತ್ನಿ ರೂಪಾ ಹೆಗಡೆ ಕರೆ ಸ್ವೀಕರಿಸಿದರು.

ಹಿಂದಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ, ‘ನಿಮ್ಮ ಪಾಡಿಗೆ ನಿಮ್ಮ ಕೆಲಸ ಮಾಡಿಕೊಂಡಿರಿ. ಅನಂತಕುಮಾರ ಮುಸ್ಲಿಮರ ಬಗ್ಗೆ ಮಾತನಾಡಿದರೆ ಚೆನ್ನಾಗಿರುವುದಿಲ್ಲ. ಅವರನ್ನು ಹಾಗೂ ಇಡೀ ಕುಟುಂಬದವರನ್ನು ನೋಡಿಕೊಳ್ಳುತ್ತೇವೆ. ಅನಂತಕುಮಾರ ಹಾಗೂ ನಿಮ್ಮನ್ನು ಜೀವ ಸಹಿತ ಬಿಡುವುದಿಲ್ಲ. ನಮಗೆ ಏನು ಮಾಡಬೇಕು ಎಂದು ಗೊತ್ತಿದೆ. ಅಯೋಧ್ಯೆ ಸಮೇತ ಎಲ್ಲವೂ ನಿಮಗೇ ಬೇಕೇ? ಅಯೋಧ್ಯೆಯನ್ನು ತೆಗೆದುಕೊಳ್ಳಲು ಬಿಡುವುದಿಲ್ಲ’ ಎಂದು ಹೇಳಿದ್ದಾನೆ. ಅಲ್ಲದೇ, ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಇದನ್ನು ಕೇಳಿದ ರೂಪಾ ಹೆಗಡೆ ಕರೆಯನ್ನು ಕಡಿತಗೊಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.