ADVERTISEMENT

ನ್ಯಾಯಾಲಯಕ್ಕೆ ಶರಣಾದ ಮೂವರು ಆರೋಪಿಗಳು

ಭೀಮಾ ತೀರದ ರೌಡಿ ಗಂಗಾಧರ ಚಡಚಣ ಕೊಲೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 27 ಜೂನ್ 2018, 16:11 IST
Last Updated 27 ಜೂನ್ 2018, 16:11 IST

ವಿಜಯಪುರ: ಭೀಮಾ ತೀರದ ರೌಡಿ ಗಂಗಾಧರ ಚಡಚಣನ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮೂವರು ಮಂಗಳವಾರ ಸಂಜೆ ಇಂಡಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

ಕೊಲೆ ಪ್ರಕರಣದ ಒಂದನೇ ಆರೋಪಿ, ಕಾಂಗ್ರೆಸ್‌ ಮುಖಂಡ ಮಹಾದೇವ ಭೈರಗೊಂಡನ ಅಳಿಯ ಸಿದ್ಧಗೊಂಡ ಮುಡವೆ, ಈಗಾಗಲೇ ಬಂಧಿತನಾಗಿರುವ ಹಣಮಂತ ಪೂಜಾರಿ ಸಹೋದರ ಭೀಮು ಪೂಜಾರಿ, ಚಡಚಣದ ಚಾಂದ್‌ ಹುಸೇನಿ ಚಡಚಣ ಶರಣಾದವರು.

ಆರೋಪಿಗಳು ಶರಣಾಗುತ್ತಿದ್ದಂತೆಯೇ, ಸಿಐಡಿ ಪೊಲೀಸರು ಸಹ ವಿಚಾರಣೆಗಾಗಿ ಅವರನ್ನು ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಆರು ಆರೋಪಿಗಳ ಬಂಧನದ ಅವಧಿ ಗುರುವಾರ (ಜೂನ್‌ 28) ಮುಗಿಯಲಿದ್ದು, ಪೊಲೀಸರು ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಿದ್ದಾರೆ ಎನ್ನಲಾಗಿದೆ.

ADVERTISEMENT

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 13 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇಲ್ಲಿಯವರೆಗೂ ಒಂಬತ್ತು ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಉಳಿದ ನಾಲ್ವರಿಗಾಗಿ ಸಿಐಡಿ ಪೊಲೀಸರು ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.