ADVERTISEMENT

ತ್ರಿಸದಸ್ಯ ಸಮಿತಿ ರಚನೆ ಸ್ವಾಗತಾರ್ಹ: ತೋಂಟದ ಶ್ರೀ

ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಸೌಲಭ್ಯ ದೊರೆಯಲಿ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 19:31 IST
Last Updated 4 ಮಾರ್ಚ್ 2021, 19:31 IST
ತೋಂಟದ ಸಿದ್ಧರಾಮ ಸ್ವಾಮೀಜಿ
ತೋಂಟದ ಸಿದ್ಧರಾಮ ಸ್ವಾಮೀಜಿ   

ಗದಗ: ಹಿಂದುಳಿದ ಜನರಿಗೆ ಅವಕಾಶ ಕಲ್ಪಿಸುವ ಕೆಲಸವೇ ಸರ್ಕಾರದ ಮೂಲ ಉದ್ದೇಶ ಆಗಿರಬೇಕು ಎಂದು ತೋಂಟದ ಸಿದ್ಧರಾಮ ಸ್ವಾಮೀಜಿಅಭಿಪ್ರಾಯಪಟ್ಟರು.

ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ವಿವಿಧ ಸಮುದಾಯಗಳು ಮೀಸಲಾತಿಯಲ್ಲಿ ಹೆಚ್ಚಿನ ಪಾಲು ಪಡೆಯಲು, ಪ್ರವರ್ಗಗಳಲ್ಲಿ ಬದಲಾವಣೆ ಮತ್ತು ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಇಟ್ಟಿರುವ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಲು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಿದ್ದು ಸ್ವಾಗತಾರ್ಹ. ಸರ್ಕಾರ ಈ ಕೆಲಸವನ್ನು ನಾಲ್ಕು ತಿಂಗಳ ಹಿಂದೆಯೇ ಮಾಡಬೇಕಿತ್ತು. ತಡವಾಗಿಯಾದರೂ ಸಮಿತಿ ರಚಿಸಿದ್ದು ಸಂತಸದ ತಂದಿದೆ’ ಎಂದು ತೋಂಟದ ಶ್ರೀಗಳು ತಿಳಿಸಿದರು.

‘ಮೀಸಲಾತಿಗೆ ಸಂಬಂಧಿಸಿದಂತೆ ಸರಿಯಾದ ದಿಕ್ಕಿನಲ್ಲಿ ಅಧ್ಯಯನ ನಡೆಯಬೇಕು. ಮೀಸಲಾತಿಯನ್ನು ಉಳ್ಳವರೇ ಪಡೆಯುವಂತಾಗಬಾರದು. ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಸೌಲಭ್ಯ ದೊರೆಯಬೇಕಿದೆ. ಈ ವಿಚಾರದಲ್ಲಿ ಸಚಿವರು, ಶಾಸಕರು, ರಾಜಕಾರಣಿಗಳು ಪಕ್ಷಭೇದ ಮರೆತು ಹೋರಾಟ ಮಾಡಬೇಕು’ ಎಂದು ಹೇಳಿದರು.

ADVERTISEMENT

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿ.ಡಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶ್ರೀಗಳು, ‘ಬೇವಿನ ಬೀಜವ ಬಿತ್ತಿ ಮಾವಿನ ಫಲ ಬೇಕೆಂದರೆ ಹೇಗೆ‘ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.