ಬೆಳಗಾವಿ: ‘ಬಾಕಿ ಉಳಿದಿರುವ ಮೂರು ತಿಂಗಳ (ಜನವರಿ, ಫೆಬ್ರವರಿ, ಮಾರ್ಚ್) ಗೃಹಲಕ್ಷ್ಮಿ ಹಣವನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.
‘ಮೂರು ತಿಂಗಳ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಗೃಹಲಕ್ಷ್ಮಿಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.