ADVERTISEMENT

ಮತ್ತೆ ಮೂವರಿಗೆ ಸೋಂಕು

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 36ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 25 ಮೇ 2020, 9:05 IST
Last Updated 25 ಮೇ 2020, 9:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸದ್ಯ ಸೋಂಕಿತರ ಸಂಖ್ಯೆ 33ರಿಂದ36ಕ್ಕೆ ಏರಿದೆ.

‘ಭಾನುವಾರ ತಡರಾತ್ರಿ ಸೋಂಕು ದೃಢಪಟ್ಟಿದ್ದು, ಈ ಮೂವರು ಮಥುರಾ (ಉತ್ತರ ಪ್ರದೇಶ), ನವದೆಹಲಿ ಮತ್ತು ಮುಂಬೈನಿಂದ ವಾಪಸ್‌ ಬಂದಿದ್ದರು. ಅವರನ್ನು ಕ್ವಾರಂಟೈನ್‌ನಲ್ಲಿಡಲಾಗಿತ್ತು. ಎಲ್ಲರನ್ನೂ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಎಸ್‌.ಎಸ್‌.ನಕುಲ್‌ ತಿಳಿಸಿದ್ದಾರೆ.

‘ಇದುವರೆಗೆ 15 ಮಂದಿ ಗುಣಮುಖರಾಗಿದ್ದು, ಒಬ್ಬರು ಮೃತಪಟ್ಟಿದ್ದರು. 17 ಮಂದಿ ಆಸ್ಪತ್ರೆಯಲ್ಲಿದ್ದರು. ಹೊಸದಾಗಿ ದಾಖಲಾದ ಮೂವರು ಸೇರಿ ಈಗ ಕೋವಿಡ್‌ ಆಸ್ಪತ್ರೆಯಲ್ಲಿ 20 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.