ADVERTISEMENT

ನೇತ್ರಾವತಿ ನದಿಯಲ್ಲಿ ಮುಳುಗಿ ಮೂವರು‌ ವಿದ್ಯಾರ್ಥಿಗಳ ಸಾವು

​ಪ್ರಜಾವಾಣಿ ವಾರ್ತೆ
Published 1 ಜನವರಿ 2019, 5:18 IST
Last Updated 1 ಜನವರಿ 2019, 5:18 IST
   

ಮಂಗಳೂರು: ನೇತ್ರಾವತಿ ನದಿಯಲ್ಲಿ ಮುಳುಗಿ ಉಪ್ಪಿನಂಗಡಿ ಪದವಿಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಮುಹಮ್ಮದ್ ಸುಹೈದ್, ಸಹೀರ್, ಫಿರ್ಝಾನ್ ಮೃತಪಟ್ಟ ವಿದ್ಯಾರ್ಥಿಗಳು. ಸೋಮವಾರ ರಾತ್ರಿ‌ ಪಿರ್ಝಾನ್ ನ ಜನ್ಮದಿನವನ್ನು ಆಚರಿಸಲು ಮೂವರು ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಕೇಕ್ ಕತ್ತರಿಸಿ, ಕೈತೊಳೆಯುವ ಸಂದರ್ಭದಲ್ಲಿ ನೀರು ಪಾಲಾಗಿದ್ದಾರೆ.

ರಾತ್ರಿ ಮನೆಗೆ ಬರದೇ ಇದ್ದುದರಿಂದ ಮಂಗಳವಾರ ಬೆಳಿಗ್ಗೆ ಪಾಲಕರು ಹುಡುಕಾಟ ನಡೆಸಿದ್ದಾರೆ. ಆದರೆ, ಬೆಳಿಗ್ಗೆ ನದಿಯಲ್ಲಿ ಶವ‌ ಪತ್ತೆಯಾಗಿವೆ. ಮೂವರೂ ಉಪ್ಪಿನಂಗಡಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿ.ಯು.ಸಿ.ಕಲಿಯುತ್ತಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.