
ಪ್ರಜಾವಾಣಿ ವಾರ್ತೆ
ಗಂಡು ಹುಲಿ ಕಳೆಬರ
ಹನೂರು: ತಾಲ್ಲೂಕಿನ ಗುಂಡಾಲ್ ಜಲಾಶಯದ ಹಿನ್ನೀರಿನಲ್ಲಿ ಭಾನುವಾರ 3 ವರ್ಷದ ಗಂಡು ಹುಲಿಯ ಕಳೆಬರ ಪತ್ತೆಯಾಗಿದೆ.
ಹುಲಿಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಭಾನುವಾರ ಬೆಳಿಗ್ಗೆ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುವಾಗ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಮೃತದೇಹ ತೇಲುತ್ತಿರುವುದು ಕಂಡುಬಂದಿದ್ದು. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮಾಹಿರಿ ನೀಡಿದ್ದಾರೆ.
ಹುಲಿ ಕಳೇಬರವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.