ಶಿವರಾಜ ತಂಗಡಗಿ
ಗಂಗಾವತಿ (ಕೊಪ್ಪಳ ಜಿಲ್ಲೆ): ‘ನಟ ಕಮಲ್ ಹಾಸನ್ ಅವರ ‘ಥಗ್ ಲೈಫ್’ ಚಲನಚಿತ್ರ ರಾಜ್ಯದ ಚಿತ್ರಮಂದಿರಗಳಲ್ಲಿ ಪ್ರದರ್ಶನ ಮಾಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಹೇಳಿದ ಮಾತನ್ನು ಗೌರವಿಸುತ್ತೇವೆ. ಆದರೆ ಕನ್ನಡದ ಸ್ವಾಭಿಮಾನದ ವಿಚಾರ ಬಂದಾಗ ಕನ್ನಡದ ಚಿತ್ರಮಂದಿರದ ಮಾಲೀಕರು ಅವರ ಚಿತ್ರಗಳಿಗೆ ಅವಕಾಶ ಕೊಡುವುದಿಲ್ಲ ಎಂದು ಭಾವಿಸಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿ ‘ಕನ್ನಡದ ಭಾಷೆ, ನೆಲ ಹಾಗೂ ಜಲದ ವಿಚಾರದಲ್ಲಿ ಒಗ್ಗಟ್ಟಾಗಿ ಇರುತ್ತೇವೆ. ನಮ್ಮ ಚಿತ್ರಮಂದಿರದ ಮಾಲೀಕರು ಹಾಗೂ ಸಿನಿಮಾ ವಿತರಕರು ಏನು ಮಾಡುತ್ತಾರೆ ಎಂಬುದರ ಬಗ್ಗೆ ಚರ್ಚೆ ಮಾಡುತ್ತೇನೆ. ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆಗೂ ಚರ್ಚಿಸುವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.