ಬೆಂಗಳೂರು: ರಾಜ್ಯದಲ್ಲಿ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಕುರಿತಾದ ವಿಚಾರಣೆಯನ್ನು ಹೈಕೋರ್ಟ್ ಜೂನ್ 10ಕ್ಕೆ ಮುಂದೂಡಿದೆ.
ಈ ನಡುವೆ ಜೂನ್ 5ರಂದು ರಾಜ್ಯದಲ್ಲಿ ಸಿನಿಮಾ ಬಿಡುಗಡೆ ಮಾಡದಿರಲು ಸಿನಿಮಾ ನಿರ್ಮಾಪಕರು ನಿರ್ಧರಿಸಿದ್ದಾರೆ ಎಂದು ನಿರ್ಮಾಪಕರ ಆಪ್ತ ಮೂಲಗಳು ತಿಳಿಸಿವೆ.
ವಾಣಿಜ್ಯ ಮಂಡಳಿ ಜೊತೆಗೆ ನಿರ್ಮಾಪಕರು ಚರ್ಚೆ ನಡೆಸಲು ಸಿದ್ಧವಿದ್ದಾರೆ ಎಂದು ನಿರ್ಮಾಪಕರ ಪರ ವಕೀಲರು ನ್ಯಾಯಾಲಯಕ್ಕೆ ಹೇಳಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಕಮಲ್ ಅವರಿಗೆ ಕ್ಷಮೆ ಕೇಳುವುದಕ್ಕೆ ಹಿಂಜರಿಕೆ ಏಕೆ ಎಂದು ಪ್ರಶ್ನಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.