ADVERTISEMENT

13 ಜಿಲ್ಲೆಗಳಲ್ಲಿ ಗುಡುಗು ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 19:45 IST
Last Updated 23 ಮಾರ್ಚ್ 2020, 19:45 IST
13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
13 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ   

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಾ.24 ಮತ್ತು 25ರಂದು ಗುಡುಗು ಸಹಿತ ಭಾರಿ ಮಳೆ
ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಹಾಗೂ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರದವರೆಗೆಹೆಚ್ಚು ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ. ಸೋಮವಾರ ಕಲಬುರ್ಗಿಯಲ್ಲಿ38.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ ಹಾಗೂ ಶಿವಮೊಗ್ಗದಲ್ಲಿ16.8 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT