ADVERTISEMENT

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2022, 2:33 IST
Last Updated 8 ಆಗಸ್ಟ್ 2022, 2:33 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ನೈರುತ್ಯ ಮುಂಗಾರು ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಚುರುಕಾಗಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಎರಡು ದಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ ಹಾಗೂ ದಕ್ಷಿಣ ಒಳನಾಡಿನ ಹಾಸನ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗೆ ಎರಡು ದಿನ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ADVERTISEMENT

ಹಾಸನ, ಶಿವಮೊಗ್ಗ, ಬೆಳಗಾವಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ.

ಕರಾವಳಿ ತೀರದಲ್ಲಿ ಬಿರುಗಾಳಿಯ ವೇಗವು ಪ್ರತಿ ಗಂಟೆಗೆ 65 ಕಿ.ಮೀ. ತಲುಪುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ಇಲಾಖೆ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಒಂದೆರಡು ಬಾರಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.