ADVERTISEMENT

ಕೋಲಾರ ಜಿಲ್ಲೆಯ ಹಲವೆಡೆ ಗುಡುಗುಸಹಿತ ಆಲಿಕಲ್ಲು ಮಳೆ

​ಪ್ರಜಾವಾಣಿ ವಾರ್ತೆ
Published 15 ಮೇ 2019, 16:13 IST
Last Updated 15 ಮೇ 2019, 16:13 IST
ಕೋಲಾರದಲ್ಲಿ ಬುಧವಾರ ವಿದ್ಯಾರ್ಥಿನಿಯರು ಸುರಿವ ಮಳೆಯಲ್ಲೇ ನಡೆದು ಹೋದರು.
ಕೋಲಾರದಲ್ಲಿ ಬುಧವಾರ ವಿದ್ಯಾರ್ಥಿನಿಯರು ಸುರಿವ ಮಳೆಯಲ್ಲೇ ನಡೆದು ಹೋದರು.   

ಕೋಲಾರ: ಜಿಲ್ಲೆಯ ಹಲವೆಡೆ ಬುಧವಾರ ಗುಡುಗುಸಹಿತ ಆಲಿಕಲ್ಲು ಮಳೆಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮೂಡಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಆರಂಭವಾದ ಮಳೆಯು ಸುಮಾರು 1 ತಾಸು ಎಡಬಿಡದೆ ಸುರಿಯಿತು. ಮನೆಯ ಮಹಡಿ ಹಾಗೂ ರಸ್ತೆಗಳಲ್ಲಿ ಆಲಿಕಲ್ಲು ರಾಶಿಯಾಗಿ ಬಿದ್ದವು. ಬೇಸಿಗೆ ಕಾರಣಕ್ಕೆ ಜಿಲ್ಲೆಯಾದ್ಯಂತ ತಾಪಮಾನ ಹೆಚ್ಚಿತ್ತು. ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನರಿಗೆ ಮಳೆಯು ಹಿತಾನುಭವ ನೀಡಿತು.

ಕೋಲಾರ, ಶ್ರೀನಿವಾಸಪುರ, ಮುಳಬಾಗಿಲು, ಮಾಲೂರು, ಕೆಜಿಎಫ್‌ ಹಾಗೂ ಬಂಗಾರಪೇಟೆ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಜಮೀನುಗಳು ಹದವಾಗಿವೆ. ಮಳೆಯ ನಿರೀಕ್ಷೆಯಲ್ಲಿದ್ದ ಮಾವು ಬೆಳೆಗಾರರಿಗೆ ತುಸು ನೆಮ್ಮದಿ ಸಿಕ್ಕಿದೆ. ಗಾಳಿಯ ತೀವ್ರತೆ ಹೆಚ್ಚಿದ್ದ ಕಾರಣಕ್ಕೆ ಕೆಲವೆಡೆ ಮಾವಿನ ಕಾಯಿ ಉದುರಿವೆ. ಉಳಿದಂತೆ ಮಳೆಯಿಂದ ಹೆಚ್ಚಿನ ಅನಾಹುತವಾಗಿಲ್ಲ.

ADVERTISEMENT

ಜಿಲ್ಲೆಯಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿದಿದ್ದು, ಗುರುವಾರವೂ (ಮೇ 16) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.