ಕಲಘಟಗಿ: ತಾಲ್ಲೂಕಿನ ಬೆಂಡಲಗಟ್ಟಿ ಗ್ರಾಮದ ಹತ್ತಿರ ಇರುವ ಹೊಲವೊಂದರಲ್ಲಿ ಹುಲಿ ಪ್ರತ್ಯಕ್ಷವಾದ ಕಾರಣ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಗ್ರಾಮದ ವಿಶ್ವನಾಥ ವೈದ್ಯ ಎಂಬುವರ ಗೋವಿನ ಜೋಳದ ಹೊಲದಲ್ಲಿ ಹುಲಿ ಅವಿತುಕೊಂಡು ಕುಳಿತಿದ್ದು, ಅದು ಗ್ರಾಮದೊಳಗೆ ನುಗ್ಗದಂತೆ ಕ್ರಮ ಕೈಗೊಂಡಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದಾರೆ.
ದಾಂಡೇಲಿ ಕಾಳಿ ಅರಣ್ಯ ಪ್ರದೇಶದಿಂದ ಹುಲಿ ಬಂದಿರುವುದಾಗಿ ತಿಳಿದುಬಂದಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಅದರ ಚಲನವಲನ ಸೆರೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.