ADVERTISEMENT

ಕೆರೆಯಿಂದ ರಕ್ಷಿಸಿ ತರಲಾಗಿದ್ದ ಹುಲಿ ಸಾವು

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2020, 11:40 IST
Last Updated 17 ಮಾರ್ಚ್ 2020, 11:40 IST
   

ಗೋಣಿಕೊಪ್ಪಲು (ಕೊಡಗು ಜಿಲ್ಲೆ): ಬಾಳೆಲೆ ಬಳಿಯ ಸುಳುಗೋಡು ಕೆರೆ ಬಳಿ ರಕ್ಷಿಸಿದ್ದ ಹುಲಿಯು ಮೈಸೂರು ಮೃಗಾಲಯಕ್ಕೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದೆ.

ಹುಲಿಯ ಸೊಂಟದ ಭಾಗದಲ್ಲಿ ಗಾಯವಾಗಿತ್ತು. ಸೋಂಕಿನಿಂದ ನಿಶಕ್ತಿಗೊಂಡು ಬಳಲುತ್ತಿತ್ತು ಎನ್ನಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿಯು ಸೆರೆ ಹಿಡಿಯಲು ಪ್ರಯತ್ನಿಸಿದಾಗಲೂ ಓಡಲು ಅದಕ್ಕೆ ಸಾಧ್ಯವಾಗಲಿಲ್ಲ. ಹೀಗಾಗಿ, ಚಿಕಿತ್ಸೆಗೆಂದು ಮೈಸೂರಿನ‌ ಚಾಮುಂಡಿ ವನ್ಯಜೀವಿ ಸಂರಕ್ಷಣಾ ಮತ್ತು ಪುನರ್ವಸತಿ ಕೇಂದ್ರಕ್ಕೆ ಸಾಗಿಸಲು ನಿರ್ಧರಿಸಲಾಗಿತ್ತು.

‘ಹುಲಿಯ ಸಾವಿಗೆ ಕಾರಣ ತಿಳಿದುಕೊಳ್ಳಲು ಅದರ ಅದರ ಅಂಗಾಂಗ ಮಾದರಿಯನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ’ ಎಂದು ನಾಗರಹೊಳೆ ವನ್ಯಜೀವಿ ವಿಭಾಗದ ಎಸಿಎಫ್ ಪ್ರಸನ್ನ ಕುಮಾರ್ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.