ADVERTISEMENT

ಟಿಪ್ಪು ಜಯಂತಿ: ಕೊಡಗಿನಲ್ಲಿ ನಿಷೇಧಾಜ್ಞೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2018, 20:05 IST
Last Updated 8 ನವೆಂಬರ್ 2018, 20:05 IST
   

ಮಡಿಕೇರಿ: ಟಿಪ್ಪು ಜಯಂತಿ ಪ್ರಯುಕ್ತ ಕೊಡಗು ಜಿಲ್ಲೆಯಾದ್ಯಂತ ಶುಕ್ರವಾರ ಸಂಜೆ 6ರಿಂದ ಭಾನುವಾರ ಬೆಳಿಗ್ಗೆ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ಕಾರ್ಯಕ್ರಮ ಹೊರತುಪಡಿಸಿ ಸಾರ್ವಜನಿಕರು ಮೆರವಣಿಗೆ ಹಾಗೂ ಸಭೆಗಳನ್ನು ನಡೆಸುವಂತಿಲ್ಲ ಎಂದು ತಿಳಿಸಿದ್ದಾರೆ. ಮದುವೆ, ನಾಮಕರಣ, ಗೃಹಪ್ರವೇಶ, ನಿಶ್ಚಿತಾರ್ಥದಂತಹ ಕಾರ್ಯಕ್ರಮಗಳಿಗೆ ವಿನಾಯಿತಿ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT