ಹೊಸಪೇಟೆ (ವಿಜಯನಗರ): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಿಪ್ಪು ಮನಸ್ಥಿತಿ ಇದೆ, ಹೀಗಾಗಿ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದರು.
‘ಮುಸ್ಲಿಮರಲ್ಲಿ ಮೂರ್ತಿ ಪೂಜೆಗೆ ನಿಷೇಧ ಇದೆ. ಭಾನು ಮುಷ್ತಾಕ್ ಪೂಜೆ ಮಾಡಿದರೆ ಅವರನ್ನು ಅವರ ಧರ್ಮದವರೇ ವಿರೋಧಿಸುತ್ತಾರೆ, ಅವರನ್ನು ಧರ್ಮದಿಂದ ಹೊರ ಹಾಕಿದರೆ ಏನು ಮಾಡ್ತೀರಾ’ ಎಂದು ಸೋಮವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಹಿಂದೂಗಳನ್ನು ವಿರೋಧಿಸುವ ಬಾನು ಮುಷ್ತಾಕ್ ಅವರಿಂದ ಚಾಮುಂಡೇಶ್ವರಿಗೆ ಏಕೆ ಪೂಜೆ ಮಾಡಿಸಬೇಕು?’ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಸರ್ಕಾರ ಹಿಂದೂ ಧರ್ಮಕ್ಕೆ ಕಳಂಕ ತರುವ ರೀತಿ ನಡೆದುಕೊಳ್ದುತ್ತಿದ್ದಾರೆ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.