ADVERTISEMENT

ಅನ್ಯ ಮಾರ್ಗದಲ್ಲಿ ಸಚಿವನಾಗುವುದು ನನ್ನ ಆತ್ಮ ಸಾಕ್ಷಿಗೆ ವಿರುದ್ಧ: ರಾಮದಾಸ್‌

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 11:00 IST
Last Updated 13 ಜನವರಿ 2021, 11:00 IST
 ರಾಮದಾಸ್‌
ರಾಮದಾಸ್‌   

ಮೈಸೂರು: ಪಕ್ಷ ನನ್ನ ತಾಯಿ ಇದ್ದಂತೆ, ಪಕ್ಷದ ಘನತೆಯೇ ನನ್ನ ಕರ್ತವ್ಯ ಎಂದು ಅರಿತವನಾದ್ದರಿಂದ ಅನ್ಯ ಮಾರ್ಗದಲ್ಲಿ ಸಚಿವನಾಗುವುದು ನನ್ನ ಆತ್ಮ ಸಾಕ್ಷಿಗೆ ವಿರುದ್ಧವಾದುದು ಎಂದು ಶಾಸಕ ರಾಮದಾಸ್‌ ಟ್ವೀಟ್‌ ಮಾಡಿದ್ದಾರೆ.

ಈ ಮೂಕ ಸಚಿವ ಸ್ಥಾನ ಸಿಗದಿರುವುದಕ್ಕೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ಮೈಸೂರು ನಗರದ ಯುವಮೋರ್ಚಾ ಅಧ್ಯಕ್ಷನಾಗಿ ಪಕ್ಷದ ಕೆಲಸ ಪ್ರಾರಂಭ ಮಾಡಿದವನು. ರಾಜ್ಯದ ಬಿಜೆಪಿ ಯುವಮೋರ್ಚಾ ಅಧ್ಯಕ್ಷನಾಗಿ ಸತತ 2 ಬಾರಿ ಕೆಲಸ ಮಾಡಿದವನು. ಸತತ 28 ವರ್ಷಗಳಿಂದ ಸಾಕಷ್ಟು ನಿಷ್ಠೆಯಿಂದ ಪಕ್ಷದ ಕೆಲಸ ಮಾಡುತ್ತಿದ್ದೇನೆ. ಈ ವಿಭಾಗದಲ್ಲಿ ಗೆದ್ದ 11 ಜನ ಬಿಜೆಪಿ ಶಾಸಕರಲ್ಲಿ 10 ಜನ ಪಕ್ಷ ಬಿಟ್ಟು ಅನ್ಯ ಪಕ್ಷಕ್ಕೆ ತೆರಳಿದ್ದರು ಎಂದು ಟ್ವೀಟ್‌ ಮಾಡಿದ್ದಾರೆ.

ನಾನು ಪಕ್ಷದ ಶಾಸಕನಾಗಿ, ಪಕ್ಷ ನನ್ನ ತಾಯಿ, ಅದರ ಘನತೆ ನನ್ನ ಕರ್ತವ್ಯ ಎಂದು ಅರಿತವನು. ನಾನೊಬ್ಬ ನಿಜವಾದ ಸ್ವಯಂಸೇವಕ , ಅನ್ಯ ಮಾರ್ಗದಲ್ಲಿ ಸಚಿವನಾಗುವುದು ನನ್ನ ಆತ್ಮ ಸಾಕ್ಷಿಗೆ ವಿರುದ್ಧವಾದುದು.

ADVERTISEMENT

ಹಳೆಯ ಮೈಸೂರು ಪ್ರಾಂತ್ಯಕ್ಕೆ ಆದ ಅನ್ಯಾಯ.! ಜಿಲ್ಲೆಯ ಬೇರೆ ಯಾರನ್ನಾದರೂ ಮಂತ್ರಿ ಮಾಡಬಹುದಿತ್ತು ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.