ADVERTISEMENT

ವಾಣಿಜ್ಯೇತರ ವಾಹನಗಳಿಗೆ ಟೋಲ್‌ ವಿನಾಯ್ತಿ?

ಕರಡು ಮಸೂದೆ ವಿವರ ಸಲ್ಲಿಸಲು ಹೈಕೋರ್ಟ್ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2018, 20:30 IST
Last Updated 20 ನವೆಂಬರ್ 2018, 20:30 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ವಾಣಿಜ್ಯೇತರ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹದಿಂದ ವಿನಾಯ್ತಿ ನೀಡುವ ಮಸೂದೆ ಸಂಸತ್ತಿನ ಮುಂದಿದೆ’ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೈಕೋರ್ಟ್‌ಗೆ ತಿಳಿಸಿದೆ.

ಹೆದ್ದಾರಿ ಟೋಲ್‌ ಶುಲ್ಕದಿಂದ ವಿನಾಯ್ತಿ ನೀಡುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಪರಅಧ್ಯಕ್ಷ ಎ.ಪಿ.ರಂಗನಾಥ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ವಿಚಾರಣೆ ನಡೆಸಿತು.

ಆಕ್ಷೇಪ: ಅರ್ಜಿದಾರರ ಪರ ಹಾಜರಿದ್ದ ಡಿ.ಆರ್.ರವಿಶಂಕರ್‌, ‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ನಿಂದ ಸ್ಥಳೀಯರಿಗೆ ವಿನಾಯ್ತಿ ನೀಡಲಾಗಿದೆ ಎಂಬ ಪ್ರಾಧಿಕಾರದ ಹೇಳಿಕೆ ಸುಳ್ಳು. ಇದು ಕೇವಲ 20 ಕಿ.ಮೀ.ವ್ಯಾಪ್ತಿಯಲ್ಲಿರುವ ನಿವಾಸಿಗಳಿಗೆ ಮಾತ್ರ ಅನ್ವಯ ಆಗುತ್ತದೆ’ ಎಂಬ ಅಂಶವನ್ನು ನ್ಯಾಯಪೀಠಕ್ಕೆ ತಿಳಿಸಿದರು.

ADVERTISEMENT

ವಿಚಾರಣೆಯನ್ನು ಡಿಸೆಂಬರ್ 19ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.