ADVERTISEMENT

ಹೆದ್ದಾರಿಯಲ್ಲಿ 60 ಕಿ.ಮೀ. ಮಧ್ಯದ ಟೋಲ್ ತೆರವು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 19:30 IST
Last Updated 14 ಸೆಪ್ಟೆಂಬರ್ 2022, 19:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಹೆದ್ದಾರಿಗಳಲ್ಲಿ 60 ಕಿ.ಮೀ. ಅಂತರದ ಮಧ್ಯೆ ಇರುವ ಟೋಲ್ ಪ್ಲಾಜಾಗಳನ್ನು ತೆರವು ಗೊಳಿಸುವ ಕುರಿತಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜೊತೆ ಮಾತುಕತೆ ನಡೆಸಿದ್ದು, ಆದಷ್ಟು ಶೀಘ್ರ ಇಂಥ ಟೋಲ್‌ಗಳನ್ನು ತೆರವು ಮಾಡಲಾಗುವುದು’ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಕೆ. ಹರೀಶ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ 60 ಕಿ.ಮಿ. ಅಂತರದ ಮಧ್ಯೆ 18 ಟೋಲ್ ಪ್ಲಾಜಾಗಳಿವೆ. ಅಂಥ ಟೋಲ್‌ಗಳನ್ನು ಕೇಂದ್ರದ ನಿಯಮದಂತೆ ತೆರವು ಮಾಡ ಬೇಕು. ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವು ದರಿಂದ. ಹೆದ್ದಾರಿ ಸಚಿವಾಲ ಯದ ಅಧಿಕಾರಿಗಳ ಜೊತೆ ಮಾತು ಕತೆ ನಡೆಸಿ, ತೆರವಿಗೆ ಮನವಿ ಮಾಡಿದ್ದೇನೆ’ ಎಂದರು.

‘ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿರುವ ಟೋಲ್‌ಗೇಟ್‌ ಅಧಿ ಕೃತವೇ’ ಎಂದು ಹರೀಶ್ ಕುಮಾರ್ ಕೇಳಿದ ಪ್ರಶ್ನೆಗೆ, ‘ಇದು ಅಧಿಕೃತವಾ ಗಿದ್ದು, ಹೆದ್ದಾರಿ ಪ್ರಾಧಿಕಾರದ ಕಾರ್ಯ ವ್ಯಾಪ್ತಿಯಲ್ಲಿದೆ. ಪ್ರಾಧಿಕಾರ 2008 ರ ಡಿ. 5ರಂದು ಹೊರಡಿಸಿದ ಅಧಿಸೂ ಚನೆಯಂತೆ ಇಲ್ಲಿ ಸುಂಕ ವಸೂಲಾತಿ ನಡೆಯುತ್ತಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.